ಸವಣೂರು : ಅಂಗಡಿಗಳಲ್ಲಿ ತಂಬಾಕು ವಸ್ತುಗಳ ಮಾರಾಟ -ಅಧಿಕಾರಿಗಳ ದಾಳಿ

0

ಸವಣೂರು : ಶಾಲಾ ಕಾಲೇಜುಗಳಿರುವ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಬಳಕೆ ಹಾಗೂ ಮಾರಾಟ ನಿಷೇಧ ಹಿನ್ನೆಲೆಯಲ್ಲಿ ಸವಣೂರು ಪೇಟೆಯ ಅಂಗಡಿಗಳಿಗೆ ಆರೋಗ್ಯ ಇಲಾಖೆ ಹಾಗೂ ತಂಬಾಕು ನಿಯಂತ್ರಣ ಮಂಡಳಿ ಅಧಿಕಾರಿಗಳು ದಾಳಿ ನಡೆಸಿ ದಂಡ ವಿಧಿಸಿದ ಘಟನೆ ಕಡಬ ತಾಲೂಕಿನ ಸವಣೂರಿನಲ್ಲಿ ನಡೆದಿದೆ.

ಸವಣೂರು ಪೇಟೆಯಲ್ಲಿರುವ ಅಂಗಡಿಗಳಿಗೆ ತೆರಳಿ ಪರಿಶೀಲನೆ ನಡೆಸಿದ ಅಧಿಕಾರಿಗಳು, ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡದಂತೆ ಸೂಚನೆ ನೀಡಿದರು‌.

ಅಲ್ಲದೆ ಬೇಕರಿ ಉತ್ಪನ್ನ ಮಾರಾಟ ಮಾಡುವ ಅಂಗಡಿಯವರು ಆಹಾರ ಸುರಕ್ಷತಾ ಪ್ರಮಾಣ ಪತ್ರ ಪಡದುಕೊಳ್ಳುವಂತೆಯೂ ಸೂಚಿಸಿದರು.

LEAVE A REPLY

Please enter your comment!
Please enter your name here