ಪುತ್ತೂರು: ಪುತ್ತೂರು ಪರಿವಾರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಅಧ್ಯಕ್ಷರಾಗಿ ಸಂತೋಷ್ ಕುಮಾರ್ ಮತ್ತು ಉಪಾಧ್ಯಕ್ಷರಾಗಿ ರತ್ನಾಕರ ನಾೖಕ್ ಮುಕ್ರಂಪಾಡಿ ಮುಂದಿನ 5 ವರ್ಷದ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇಂದು ಚುನಾವಣಾಧಿಕಾರಿ ಎಂ ಎಸ್ ನವೀನ್ ಕುಮಾರ್ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ನಡೆದಿದೆ. ಮಾ.9ರಂದು ಸೊಸೈಟಿ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 11ಮಂದಿ ಸದಸ್ಯರು ಆಯ್ಕೆಯಾಗಿದ್ದು, 3 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದರು.