ಪುತ್ತೂರು: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಳೆದ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇತ್ತು ಆಗ ನಾವೇ ಅಲ್ಲಿಗೆ ನೀರಿನ ವ್ಯವಸ್ಥೆ ಮಾಡಿದ್ದೆವು ಈ ಬಾರಿ ಏನು ವ್ಯವಸ್ಥೆ ಮಾಡಿಕೊಂಡಿದ್ದೀರಿ? ಎಂದು ಮುಖ್ಯಾಧಿಕಾರಿಯವರಲ್ಲಿ ಕೆಡಿಪಿ ಸಭೆಯಲ್ಲಿ ಶಾಸಕ ಅಶೋಕ್ ರೈ ಪ್ರಶ್ನಿಸಿದರು.
ಉತ್ತರಿಸಿದ ಮುಖ್ಯಾಧಿಕಾರಿಗಳು ಈಗಾಗಲೇ ಟ್ಯಾಂಕರ್ ಮತ್ತು ನೀರಿನ ಸಂಗ್ರಹಕ್ಕೆ ಕೊಳವೆ ಬಾವಿಯನ್ನು ರೆಡಿ ಮಾಡಿದ್ದೇವೆ. ಎಲ್ಲೂ ಸಮಸ್ಯೆಯಾಗದಂತೆ ಬದಲಿ ವ್ಯವಸ್ಥೆಯನ್ನು ಮಾಡಿದ್ದೇವೆ ಎಂದು ಸಭೆಯಲ್ಲಿ ತಿಳಿಸಿದರು. ಈ ಬಾರಿ ಎಲ್ಲೂ ಕುಡಿಯುವ ನೀರಿಗೆ ಸಮಸ್ಯೆ ಆಗಬಾರದು ಎಂದು ಶಾಸಕರು ಖಡಕ್ ಸೂಚನೆ ನೀಡಿದರು. ಶಾಸಕರ ಸೂಚನೆಗೆ ಅಧಿಕಾರಿ ಒಪ್ಪಿಕೊಂಡರು.