ರಾಮಕುಂಜ: 65 ಲಕ್ಷ ರೂ.ಅನುದಾನದಲ್ಲಿ ರಾಮಕುಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಳೆನೇರೆಂಕಿ ಗ್ರಾಮದಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಹೊಸ ಕಟ್ಟಡ ನಿರ್ಮಾಣಕ್ಕೆ ಮಾ.16ರಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಗುದ್ದಲಿ ಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿದ ಶಾಸಕಿ ಭಾಗೀರಥಿ ಮುರುಳ್ಯ ಅವರು, ಹೊಸ ಕಟ್ಟಡದ ಕಾಮಗಾರಿ ಶೀಘ್ರದಲ್ಲಿ ಪೂರ್ಣಗೊಂಡು ಜನರ ಉಪಯೋಗಕ್ಕೆ ಬರಲಿ, ಎಲ್ಲರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಈ ಕಟ್ಟಡ ಸಹಕಾರಿಯಾಗಲಿ ಎಂದು ಹೇಳಿ ಶುಭಹಾರೈಸಿದರು. ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ, ಕೊಯಿಲ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಶಿಶಿರ, ರಾಮಕುಂಜ ಗ್ರಾ.ಪಂ.ಅಧ್ಯಕ್ಷೆ ಸುಚೇತಾ ಬರೆಂಬೆಟ್ಟು, ಗುತ್ತಿಗೆದಾರ ರಾಜೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮಹೇಶ್ ಪಾತೃಮಾಡಿ ಸ್ವಾಗತಿಸಿ, ನಿರೂಪಿಸಿದರು. ಪ್ರವೀಣ್ ಹಿರಿಂಜ ವಂದಿಸಿದರು. ತಾ.ಪಂ.ಮಾಜಿ ಸದಸ್ಯೆ ತೇಜಸ್ವಿನಿ ಕಟ್ಟಪುಣಿ, ರಾಮಕುಂಜ ಗ್ರಾ.ಪಂ.ಉಪಾಧ್ಯಕ್ಷ ಕೇಶವ ಗಾಂಧಿಪೇಟೆ, ಪ್ರಮುಖರಾದ ಪ್ರದೀಪ್ ರೈ ಮನವಳಿಕೆ, ರವಿಪ್ರಸಾದ್ ಶೆಟ್ಟಿ ನೆಲ್ಯಾಡಿ, ಸಂತೋಷ್ ರಾವ್ ಇಜ್ಜಾವು, ಭಾಸ್ಕರ ಹಿರಿಂಜ, ಗ್ರಾ.ಪಂ.ಸದಸ್ಯರು, ಆರೋಗ್ಯ ಇಲಾಖೆ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಗ್ರಾಮಸ್ಥರು ಸಮಾರಂಭದಲ್ಲಿ ಉಪಸ್ಥಿತರಿದ್ದರು.