ಉಪ್ಪಿನಂಗಡಿ: ಇಲ್ಲಿನ ವಿಜಯ- ವಿಕ್ರಮ ಜೋಡುಕರೆ ಕಂಬಳ ಸಮಿತಿಯ ವತಿಯಿಂದ ನಡೆಯುವ ‘ಉಬಾರ್ ಕಂಬಳೋತ್ಸವ’ಕ್ಕೆ ಕೆಲವೇ ದಿನಗಳು ಬಾಕಿಯಿದ್ದು, ಇದಕ್ಕಾಗಿ ಭರದ ಸಿದ್ಧತೆಗಳು ನಡೆಯುತ್ತಿವೆ. ಇಲ್ಲಿನ ಪೂರ್ವ ತಯಾರಿಯ ಬಗ್ಗೆ ಚರ್ಚಿಸಲು ಮಾ.15ರಂದು ಕಂಬಳ ಕರೆಯ ಕೂಟೇಲುವಿನ ಸಮೀಪವಿರುವ ನೇತ್ರಾವತಿ ನದಿ ಕಿನಾರೆಯಲ್ಲಿರುವ ಕಂಬಳ ಕರೆಯ ಬಳಿ ಸಮಿತಿಯ ಸಭೆ ನಡೆಯಿತು.
ಕಂಬಳ ಸಮಿತಿಯ ಅಧ್ಯಕ್ಷರು ಹಾಗೂ ಶಾಸಕರಾದ ಅಶೋಕ್ ಕುಮಾರ್ ರೈಯವರ ಸಾರಥ್ಯದಲ್ಲಿ ಮಾ.22ರಂದು ನಡೆಯುವ ಉಬಾರ್ ಕಂಬಳೋತ್ಸವದಲ್ಲಿ ಈ ಬಾರಿಯೂ ಸಸ್ಯ ಮೇಳ, ಆಹಾರ ಮೇಳ ಹಾಗೂ ಮಕ್ಕಳ ಮನೋರಂಜನಾ ಕಾರ್ಯಕ್ರಮಗಳು ಹಾಗೂ ನೇತ್ರಾವತಿ ನದಿ ಹಿನ್ನೀರಿನಲ್ಲಿ ಬೋಟಿಂಗ್ ಅನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಎಲ್ಲಾ ವಯೋಮಾನದವರಿಗೆ ಮನೋರಂಜನೆ ಒದಗಿಸಲು ಅವಕಾಶ ಕಲ್ಪಿಸಲಾಗಿದೆ. ಈ ಬಾರಿ ನಡೆಯುವ ಕಂಬಳವು 39ನೇ ವರ್ಷದ್ದಾಗಿದ್ದು, ವರ್ಷಕ್ಕಿಂತ ವರ್ಷಕ್ಕೆ ಅದ್ದೂರಿಯಾಗಿ ಕಂಬಳವನ್ನು ಆಯೋಜಿಸಲು ಸಿದ್ಧತೆ ನಡೆಸಲಾಗಿದೆ. ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಅವರವರ ಜವಾಬ್ದಾರಿಗಳನ್ನು ಅರಿತುಕೊಂಡು ಸಹಕಾರ ನೀಡುವ ಮೂಲಕ ಕಂಬಳೋತ್ಸವದ ಯಶಸ್ಸಿನಲ್ಲಿ ಪಾಲು ಪಡೆಯಬೇಕೆಂದು ಕಂಬಳ ಸಮಿತಿಯ ಕಾರ್ಯಾಧ್ಯಕ್ಷರಾದ ಅಶೋಕ್ ಕುಮಾರ್ ರೈ ಅರ್ಪಿಣಿಗುತ್ತು ತಿಳಿಸಿದರು.
ಸಭೆಯಲ್ಲಿ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೇಶವ ಭಂಡಾರಿ ಬೆಳ್ಳಿಪ್ಪಾಡಿ ಕೈಪ, ಕೋಶಾಧಿಕಾರಿ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು, ಉಪಾಧ್ಯಕ್ಷರಾದ ವಿದ್ಯಾಧರ ಜೈನ್ ಪದ್ಮವಿದ್ಯಾ, ರಾಮಚಂದ್ರ ಮಣಿಯಾಣಿ ಉಪ್ಪಿನಂಗಡಿ, ಜಯಂತ ಪೊರೋಳಿ, ಪ್ರವೀಣ್ ಕುಮಾರ್ ಕದಿಕ್ಕಾರು ಬೀಡು, ಶಿವಪ್ರಸಾದ್ ರೈ ಮಠಂತಬೆಟ್ಟು, ಮುರಳೀಧರ ರೈ ಮಠಂತಬೆಟ್ಟು, ಸಂಘಟನಾ ಕಾರ್ಯದರ್ಶಿಗಳಾದ ಯೊಗೀಶ್ ಎಸ್. ಸಾಮಾನಿ ಸಂಪಿಗೆದಡಿ ಮಠಂತಬೆಟ್ಟು, ಕೃಷ್ಣಪ್ರಸಾದ್ ಬೊಳ್ಳಾವು, ದಿಲೀಪ್ ಶೆಟ್ಟಿ ಕರಾಯ, ವಿಜಯ ಪೂಜಾರಿ ಚೀಮುಳ್ಳು, ಸಹ ಸಂಚಾಲಕರಾದ ರಾಜೇಶ್ ಶೆಟ್ಟಿ, ಕುಮಾರನಾಥ ಪಲ್ಲತ್ತಾರು, ಕಾರ್ಯದರ್ಶಿ ಶಿವರಾಮ ಶೆಟ್ಟಿ ಗೋಳ್ತಮಜಲು, ಜೊತೆ ಕಾರ್ಯದರ್ಶಿ ವಿಶ್ವನಾಥ ಶೆಟ್ಟಿ ಕಂಗ್ವೆ, ವಿವಿಧ ಸಮಿತಿಗಳ ಪದಾಧಿಕಾರಿಗಳಾದ ಜಗದೀಶ ಕುಮಾರ್ ಪರಕಜೆ, ರಾಘವೇಂದ್ರ ನಾಯಕ್ ನಟ್ಟಿಬೈಲು, ಪ್ರಭಾಕರ ಸಾಮಾನಿ ಮಠಂತಬೆಟ್ಟು, ಅಬ್ದುಲ್ ಖಾದರ್ ಉಪಸ್ಥಿತರಿದ್ದು, ಸಲಹೆ- ಸೂಚನೆಗಳನ್ನು ನೀಡಿದರು.