ಎಸ್‌ಡಿಪಿಐ ಪುತ್ತೂರು ಮಾಸಿಕ ಸಭೆಯಲ್ಲಿ ಇಫ್ತಾರ್ ಕೂಟ

0

ಪುತ್ತೂರು: ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಮಾಸಿಕ ಸಭೆಯು ಇಫ್ತಾರ್ ಕಾರ್ಯಕ್ರಮದೊಂದಿಗೆ ಮಾ.15 ರಂದು ಪುತ್ತೂರಿನ ಪ್ರೆಸ್ಟೀಜಿ ಪೆವಿಲಿಯನ್ ಸಭಾಂಗಣದಲ್ಲಿ ಕ್ಷೇತ್ರ ಸಮಿತಿಯ ಅಧ್ಯಕ್ಷ ಅಶ್ರಫ್ ಬಾವು ರವರ ಅಧ್ಯಕ್ಷತೆಯಲ್ಲಿ ನಡೆಯಿತು.


ಮುಂಬರುವ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸುವುದೆಂದು ಸಭೆಯಲ್ಲಿ ತೀರ್ಮಾನಿಸಲಾಯಿತು. ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದಾತ್ ಬಜತ್ತೂರು ಮಾನಾಡಿದರು. ಎಸ್‌ಡಿಪಿಐ ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಅಲೆಕ್ಕಾಡಿ, ಕಾರ್ಯದರ್ಶಿ ಅಶ್ರಫ್ ತಲಪಾಡಿ, ಜಿಲ್ಲಾ ಸಮಿತಿ ಸದಸ್ಯರಾದ ಹಾಜಿ ಇಬ್ರಾಹಿಂ ಸಾಗರ್, ಕ್ಷೇತ್ರ ಸಮಿತಿ ಉಪಾಧ್ಯಕ್ಷ ಅಬ್ದುಲ್ ಹಮೀದ್ ಸಾಲ್ಮರ ಹಾಗೂ ಕ್ಷೇತ್ರ ಸಮಿತಿಯ ಪದಾಧಿಕಾರಿಗಳು ಸದಸ್ಯರು ಎಲ್ಲಾ ನಗರ ಸಮಿತಿ ಬ್ಲಾಕ್ ಸಮಿತಿಯ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು ಉಪಸ್ಥಿತರಿದ್ದರು. ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಕಾರ್ಯದರ್ಶಿ ಉಸ್ಮಾನ್ ಏಕೆ ಸ್ವಾಗತಿಸಿ, ಜೊತೆ ಕಾರ್ಯದರ್ಶಿ ರಹಿಮಾನ್ ಪುತ್ತೂರು ವಂದಿಸಿದರು.

LEAVE A REPLY

Please enter your comment!
Please enter your name here