ನಾಳೆ (ಮಾ.19) ರಂದು ಆಲಂಕಾರು ಪೇಟೆ ಸವಾರಿ
ಆಲಂಕಾರು:ಸೀಮಾ ದೇವಸ್ಥಾನ ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಹಾಗೂ ದೈವಗಳ ನೇಮೋತ್ಸವ ಮಾ. 14ರಿಂದ 24ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಮಾ.14ರಂದು ಬೆಳಿಗ್ಗೆ 8ರಿಂದ ಸ್ವಸ್ತಿ ಪುಣ್ಯಾಹ ವಾಚನ, ನವಕ ಪ್ರಧಾನ, ಗಣಹೋಮ, ಕಲಶಾಭಿಷೇಕ, ಗೊನೆ ಮುಹೂರ್ತ, ಮಹಾಪೂಜೆ, ಅನ್ನಸಂತರ್ಪಣೆ ನಡೆದು, ರಾತ್ರಿ 7ಕ್ಕೆ ಧ್ವಜಾರೋಹಣ, ಮಹಾಪೂಜೆ, ಭೂತಬಲಿ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.
ಮಾ. 15ರಂದು ಮಧ್ಯಾಹ್ನ ಮಹಾಪೂಜೆ, ನಿತ್ಯಬಲಿ, ಪ್ರಸಾದ ವಿತರಣೆ ನಡೆದು, ರಾತ್ರಿ 7ರಿಂದ ಮಹಾಪೂಜೆ, ಭೂತಬಲಿ, ಪ್ರಸಾದ ವಿತರಣೆ ನಡೆಯಲಿದೆ.ಮಾ. 16ರಂದು ಮಧ್ಯಾಹ್ನ ಮಹಾಪೂಜೆ, ನಿತ್ಯಬಲಿ, ಪ್ರಸಾದ ವಿತರಣೆ, ಸಂಜೆ 5ರಿಂದ ದೈವಗಳ ಭಂಡಾರ ತೆಗೆಯುವುದು, ರಾತ್ರಿ 7ರಿಂದ ಮಹಾಪೂಜೆ, ಭೂತಬಲಿ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ರಾತ್ರಿ ಅರಸು ಉಳ್ಳಾಯ, ಮಹಿಷಂತಾಯ ಮತ್ತು ರಕ್ತೇಶ್ವರಿ ದೈವಗಳ ನೇಮೋತ್ಸವ ನಡೆಯಿತು.
ಮಾ. 17ರಂದು ಮಧ್ಯಾಹ್ನ ಮಹಾಪೂಜೆ, ನಿತ್ಯಬಲಿ, ಪ್ರಸಾದ ವಿತರಣೆ, ಸಂಜೆ 5ರಿಂದ ದೈವಗಳ ಭಂಡಾರ ತೆಗೆಯುವುದು, ಸಂಜೆ 6ರಿಂದ ಉಗ್ರಾಣ ಮುಹೂರ್ತ, ಬಲಿ ಹೊರಟು ಉತ್ಸವ, ವಸಂತ ಕಟ್ಟೆ ಪೂಜೆ, ಮಹಾಪೂಜೆ, ಭೂತಬಲಿ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ರಾತ್ರಿ ಧೂಮಾವತಿ, ಬಂಟ ಮತ್ತು ಕೊಡಮಣಿತ್ತಾಯ ದೈವಗಳ ನರ್ತನೋತ್ಸವ ನಡೆಯಿತು.
ಮಾ. 18ರಂದು ಬೆಳಿಗ್ಗೆ ಬಲಿ ಹೊರಟು ಉತ್ಸವ, ಮಧ್ಯಾಹ್ನ ಮಹಾಪೂಜೆ, ನಿತ್ಯಬಲಿ, ಪ್ರಸಾದ ವಿತರಣೆ ನಡೆಯಿತು. ಸಂಜೆ 6.30ರಿಂದ ಬಲಿ ಹೊರಟು ಉತ್ಸವ, ವಸಂತ ಕಟ್ಟೆಪೂಜೆ, ಮಹಾಪೂಜೆ, ಭೂತಬಲಿ, ಪ್ರಸಾದ ವಿತರಣೆ ನಡೆಯಲಿದೆ.

ಮಾ. 19ರಂದು ಬೆಳಿಗ್ಗೆ ಬಲಿ ಹೊರಟು ಉತ್ಸವ, ಮಧ್ಯಾಹ್ನ 12ರಿಂದ ಮಹಾಪೂಜೆ, ನಿತ್ಯಬಲಿ, ಪ್ರಸಾದ ವಿತರಣೆ, ಸಂಜೆ 4.30ರಿಂದ ಬಲಿ ಹೊರಟು ಉತ್ಸವ, ಆಲಂಕಾರು ಪೇಟೆ ಸವಾರಿ, ಆಲಂಕಾರು ಸಾರ್ವಜನಿಕ ಕಟ್ಟೆಪೂಜೆಗಳು, ಮಹಾಪೂಜೆ, ಭೂತಬಲಿ, ಪ್ರಸಾದ ವಿತರಣೆ ನಡೆಯಲಿದೆ.
ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ರಾತ್ರಿ 7ರಿಂದ ಆಲಂಕಾರು ಪೇಟೆಯಲ್ಲಿ ಪುತ್ತೂರು ಬಲ್ನಾಡು ಸಂಸಾರ ಕಲಾವಿದೆರ್ ಇವರಿಂದ ನಂಬಿಕೆದಾಯೆ ಭಕ್ತಿಪ್ರಧಾನ ಹಾಸ್ಯ ಸಾಮಾಜಿಕ ನಾಟಕ ಪ್ರದರ್ಶನಗೊಳ್ಳಲಿದೆ. ದೇವರ ಸವಾರಿ ಉತ್ಸವದ ಜೊತೆಯಲ್ಲಿ ಶ್ರೀ ದುರ್ಗಾಂಬಾ ಅಲಂಕಾರ ಸಮಿತಿ ಹಾಗೂ ಶ್ರೀ ಕ್ಷೇತ್ರ ಶರವೂರು ಇವರ ಸಂಯೋಜನೆಯಲ್ಲಿ ಚಲನಚಿತ್ರ ಖ್ಯಾತಿಯ ರಾಜ್ಯ ಪ್ರಶಸ್ತಿ ವಿಜೇತ ಶೆಟ್ಟಿ ಆರ್ಟ್ಸ್ ಬಳಗದ ಗಿರಿಧರ ಶೆಟ್ಟಿ ಬೆಳ್ತಂಗಡಿ ಇವರಿಂದ ಕೀಲು ಕುದುರೆ, ಅರಸು ನಾಟ್ಯ ಹಾಗೂ ಯಕ್ಷಗಾನ ಶೈಲಿಯ ಗಜಗಾತ್ರದ ಆಕರ್ಷಕ ಗೊಂಬೆಗಳ ಪ್ರದರ್ಶನ ನಡೆಯಲಿದೆ.