ನೆಲ್ಯಾಡಿ: ನೆಲ್ಯಾಡಿ ಗ್ರಾಮ ಪಂಚಾಯತ್ನ ೨೦೨೪-೨೫ನೇ ಸಾಲಿನ ಮಹಿಳಾ ಗ್ರಾಮಸಭೆ ಹಾಗೂ ವಿಶ್ವ ಮಹಿಳಾ ದಿನಾಚರಣೆ ಮಾ.೧೫ರಂದು ಗ್ರಾ.ಪಂ.ಸಭಾಭವನದಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಪುತ್ತೂರು ಸಾಂತ್ವನ ಕೇಂದ್ರದ ಆಪ್ತ ಸಮಾಲೋಚಕಿ ನಿಶಾಪ್ರಿಯಾ ಅವರು ಮಹಿಳಾ ದಿನಾಚರಣೆಯ ಮಹತ್ವ ಹಾಗೂ ಮಹಿಳೆಯರ ಸ್ಥಾನಮಾನದ ಕುರಿತಂತೆ ಮಾತನಾಡಿದ. ಗ್ರಾ.ಪಂ.ಅಧ್ಯಕ್ಷ ಯಾಕುಬ್ ಯು ಯಾನೆ ಸಲಾಂ ಬಿಲಾಲ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ರೇಷ್ಮಾಶಶಿ, ಸದಸ್ಯರಾದ ಉಷಾ ಒ.ಕೆ., ಪುಷ್ಪಾ ಪಡುಬೆಟ್ಟು, ಆನಂದ ಪಿಲವೂರು, ರವಿಪ್ರಸಾದ್ ಶೆಟ್ಟಿ, ಅಬ್ದುಲ್ ಜಬ್ಬಾರ್, ಮಹಮ್ಮದ್ ಇಕ್ಬಾಲ್, ಜಯಲಕ್ಷ್ಮೀಪ್ರಸಾದ್, ಚೇತನ,ಜಯಂತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸನ್ಮಾನ:
ಗ್ರಾ.ಪಂ.ಸದಸ್ಯೆಯಾಗಿದ್ದು ಕಡಬ ತಾ.ಪಂ.ಕೆಡಿಪಿ ಸದಸ್ಯೆಯಾಗಿ ಆಯ್ಕೆಗೊಂಡ ಉಷಾ ಒ.ಕೆ., ಗ್ರಾಮ ಪಂಚಾಯಿತಿಯ ಮಹಿಳಾ ಸಿಬ್ಬಂದಿಗಳಾದ ಭವ್ಯ, ಲಲಿತ, ಲೀಲಾವತಿ, ಪುನರ್ವಸತಿ ಕಾರ್ಯಕರ್ತೆ ಸಹನಾ ಆರ್., ಗ್ರಂಥಾಲಯ ಮೇಲ್ವಿಚಾರಕಿ ಮನೀಷಾ, ತ್ಯಾಜ್ಯ ವಾಹನ ಚಾಲಕಿ ಭಾರತಿ, ಘಟಕದ ಸಿಬ್ಬಂದಿಗಳಾದ ಜಯಂತಿ, ಯಮುನಾ ಅವರನ್ನು ಗ್ರಾಮ ಪಂಚಾಯತ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಪಿಡಿಒ ಮೋಹನ್ಕುಮಾರ್ ಸ್ವಾಗತಿಸಿದರು. ಕಾರ್ಯದರ್ಶಿ ಅಂಗು ನಿರೂಪಿಸಿ, ವಂದಿಸಿದರು. ಸಿಬ್ಬಂದಿಗಳು ಸಹಕರಿಸಿದರು. ಸಭೆಯಲ್ಲಿ ಮಹಿಳೆಯರು, ಸ್ತ್ರೀಶಕ್ತಿ ಸಂಘದ ಸದಸ್ಯೆಯರು, ಸಂಜೀವಿನಿ ಒಕ್ಕೂಟದ ಸದಸ್ಯೆಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು. ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆಯರಿಗೆ ವಿವಿಧ ಆಟೋಟ ಸ್ಪರ್ಧೆ ನಡೆಸಿ ಬಹುಮಾನ ವಿತರಿಸಲಾಯಿತು.




