ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ|ಎಂ.ಎನ್.ಆರ್,ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ರವರ ಅಭಿವಂದನಾ ಕಾರ್ಯಕ್ರಮ- ಯಶಸ್ವಿ-ಕೃತಜ್ಞತಾ ಸಭೆ

0

ಪುತ್ತೂರು: ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಎಸ್‌ಸಿಆರ್ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದ ಸಹಕಾರ ರತ್ನ ಡಾ|ಎಂ.ಎನ್.ರಾಜೇಂದ್ರ ಕುಮಾರ್ ಹಾಗೂ ದ.ಕ.ಜಿಲ್ಲಾ ಸಹಕಾರಿ ಯೂನಿಯನ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶಶಿಕುಮಾರ್ ರೈ ಬಾಲ್ಯೊಟ್ಟುರವರಿಗೆ ಪುತ್ತೂರು ಉಪವಿಭಾಗದ ಸಹಕಾರಿ ಬಂಧುಗಳ ವತಿಯಿಂದ ನಡೆದ ಅಭಿವಂದನಾ ಕಾರ್ಯಕ್ರಮದ ಯಶಸ್ಸಿನ ಹಿನ್ನಲೆಯಲ್ಲಿ ಮಾ.19ರಂದು ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಕೃತಜ್ಞತಾ ಸಭೆ ನಡೆಯಿತು.‌


ಅಭಿನಂದನಾ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿದ್ದ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಹಾಗೂ ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಮಾತನಾಡಿ, ಅಭಿನಂದನಾ ಕಾರ್ಯಕ್ರಮ ಬಹಳ ಭವ್ಯವಾಗಿ ಸುಂದರವಾಗಿ ನಡೆದಿದೆ. ಅಭಿನಂದನೆ ಸ್ವೀಕರಿಸಲು ನಾನು ಅರ್ಹನಾಗಿದ್ದೇನೆಯೇ ಎಂಬ ಸಂಶಯ ನನ್ನಲ್ಲಿತ್ತು. ಅಲ್ಲದೆ ಅಭಿನಂದನೆ ಪಡೆಯಲು ಕೂಡ ಮುಜುಗರವಾಗುತ್ತಿತ್ತು. ನಿಮ್ಮೆಲ್ಲರ ಅಭಿನಂದನೆಗೆ ನಾನು ಆಭಾರಿಯಾಗಿದ್ದೇನೆ. ನಿಮ್ಮ ಅಭಿನಂದನೆಯಿಂದ ನನ್ನ ಜವಾಬ್ದಾರಿಯೂ ಹೆಚ್ಚಿದೆ. ಕೆಲಸ ಮಾಡಲು ನನಗೆ ಉತ್ಸಾಹವನ್ನೂ ನೀಡಿದೆ. ಅಭಿನಂದನೆಯಿಂದ ನಾನು ವಿಚಲಿತನಾಗಿದ್ದು ಸಾಧಿಸಬೇಕಾದದ್ದು ಇನ್ನೂ ಇದೆ ಎಂದರು. ನಾನು ಸಹಕಾರಿ ಯೂನಿಯನ್ ಅಧ್ಯಕ್ಷನಾಗಿ ನಿಮ್ಮ ಕೆಲಸ ಕಾರ್ಯಗಳನ್ನು ಮಾಡುತ್ತೇನೆ. 5 ತಾಲೂಕುಗಳಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘದವರಿಗೆ ಯೂನಿಯನ್ ವತಿಯಿಂದ ಕಾರ್ಯಾಗಾರ ನಡೆಸಲಾಗಿದೆ. ಕಾಮನ್ ಸಾಪ್ಟ್‌ವೇರ್ ಬಗ್ಗೆ ಈಗಾಗಲೇ ಚರ್ಚೆ ನಡೆದಿದೆ. ಮುಂದಿನ ದಿನಗಳಲ್ಲಿ ಸಾಪ್ಟ್‌ವೇರ್ ಬಗ್ಗೆ ಇರುವ ಸಮಸ್ಯೆಗಳನ್ನು ಪರಿಹರಿಸುತ್ತೇವೆ ಎಂದು ಹೇಳಿದ ಅವರು ನಿಮ್ಮೆಲ್ಲರ ಶ್ರಮದಿಂದ ಅಭಿನಂದನಾ ಕಾರ್ಯಕ್ರಮ ಯಶಸ್ಸಾಗಿದೆ ಎಂದು ಹೇಳಿ ಕೃತಜ್ಞತೆ ಸಲ್ಲಿಸಿದರು.


ಅಭಿನಂದನಾ ಸಮಿತಿ ಅಧ್ಯಕ್ಷ, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಹಾಗೂ ದ.ಕ.ಹಾಲು ಉತ್ಪಾದಕರ ಒಕ್ಕೂಟದ ಉಪಾಧ್ಯಕ್ಷ ಜಯರಾಮ ರೈ ಬಳೆಜ್ಜ ಮಾತನಾಡಿ ಶಶಿಕುಮಾರ್ ರೈರವರು ಸಹಕಾರಿ ಕ್ಷೇತ್ರದಲ್ಲಿ ತಳಮಟ್ಟದಲ್ಲಿ ಜವಾಬ್ದಾರಿಯನ್ನು ಪಡೆದು ಬೆಳೆದವರು. ಹಲವು ಅಭಿನಂದನಾ ಸಮಿತಿಗಳ ಅಧ್ಯಕ್ಷರಾಗಿಯೂ ಕಾರ್ಯಕ್ರಮ ಸಂಘಟಿಸಿದ್ದಾರೆ. ಹಾಗಾಗಿ ಅವರ ಮಾರ್ಗದರ್ಶನ, ಸಲಹೆ ಸೂಚನೆಯನ್ನು ಪ್ರತೀ ಹಂತದಲ್ಲಿ ನಾನು ಪಡೆದುಕೊಂಡಿದ್ದೇನೆ. ಇದರಿಂದ ಕಾರ್ಯಕ್ರಮ ಯಶಸ್ವಿಯಾಗಲು ಕಾರಣವಾಯಿತು. ಅಭಿನಂದನಾ ಸಮಿತಿ ಅಧ್ಯಕ್ಷರಾದ ಮೇಲೆ ಹೆದರಿಕೆ ಆಗುತ್ತಿತ್ತು. ನಿಮ್ಮ ಮನೆಯವರ ಕಾರ್ಯಕ್ರಮ ಎಂದು ಭಾಗವಹಿಸಿದ್ದೀರಿ. ನಿಮ್ಮೆಲ್ಲರ ಸಹಕಾರ, ಪ್ರೋತ್ಸಾಹದಿಂದ ಕಾರ್ಯಕ್ರಮ ಯಶಸ್ವಿ ಪಡೆದಿದೆ ಎಂದು ಹೇಳಿದ ಅವರು ಕೃತಜ್ಞತೆ ಸಲ್ಲಿಸಿದರು.


ಅಭಿನಂದನಾ ಸಮಿತಿ ಪುತ್ತೂರು ತಾಲೂಕು ಸಂಚಾಲಕ, ಒಳಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ ಮಾತನಾಡಿ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಕಾರ್ಯಕ್ರಮ ಯಶಸ್ವಿಯಾಗುತ್ತದೆ ಎಂಬುದಕ್ಕೆ ಅಭಿನಂದನಾ ಕಾರ್ಯಕ್ರಮವೇ ಸಾಕ್ಷಿ. ಸಮಿತಿಯಲ್ಲಿ ಜವಾಬ್ದಾರಿ ವಹಿಸಿದ್ದವರು ಕಾರ್ಯಕ್ರಮದಲ್ಲಿ ಉತ್ತಮವಾಗಿ ತೊಡಗಿಸಿಕೊಂಡಿದ್ದಾರೆ. ಆದುದರಿಂದ ಕಾರ್ಯಕ್ರಮ ಅಭೂತಪೂರ್ವ ಯಶಸ್ವಿಯಾಗಿದೆ. ಇದು ಪರಿಶ್ರಮಕ್ಕೆ ಸಿಕ್ಕ ಪ್ರತಿಫಲವಾಗಿದೆ ಎಂದ ಅವರು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಅಭಿನಂದನಾ ಸಮಿತಿ ಸುಳ್ಯ ತಾಲೂಕು ಸಂಚಾಲಕ, ಅರಂತೋಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಮಾತನಾಡಿ ದ.ಕ.ಸಹಕಾರಿ ಯೂನಿಯನ್‌ನಲ್ಲಿ ಈ ಹಿಂದೆ ಯಾವುದೇ ಸಹಕಾರ, ಸ್ಪಂದನೆ ನಮಗೆ ಸಿಗುತ್ತಿರಲಿಲ್ಲ. ಆದರೆ ಶಶಿಕುಮಾರ್ ರೈ ಬಾಲ್ಯೊಟ್ಟು ಯೂನಿಯನ್ ಅಧ್ಯಕ್ಷರಾದ ಮೇಲೆ ನಮಗೆ ಸೂಕ್ತ ಸ್ಪಂದನೆ ಸಿಗುತ್ತಿದೆ. ಸಮಸ್ಯೆಗಳಿಗೆ ಪರಿಹಾರ ದೊರಕುತ್ತಿದೆ ಎಂದರು.

ಶಶಿಕುಮಾರ್ ರೈರವರಿಗೆ ಸುಳ್ಯ ಸಹಕಾರಿ ಬಂಧುಗಳಿಂದ ಅಭಿನಂದನೆ ಮಾಡಬೇಕೆಂದು ತೀರ್ಮಾನಿಸಿದ್ದೆವು. ಬಳಿಕ ಮೂರು ತಾಲೂಕುಗಳಿಂದ ಒಟ್ಟಿಗೆ ಕಾರ್ಯಕ್ರಮ ಆಯೋಜನೆ ಮಾಡಲು ನಿರ್ಧರಿಸಲಾಗಿತ್ತು. ನ ಭೂತೋ ನ ಭವಿಷ್ಯತಿ ಎಂಬಂತೆ ಕಾರ್ಯಕ್ರಮ ನಡೆದಿದೆ ಎಂದು ಹೇಳಿದರು. ಅಭಿನಂದನಾ ಸಮಿತಿ ಬೆಳ್ತಂಗಡಿ ತಾಲೂಕು ಸಂಚಾಲಕ ಬೆಳ್ತಂಗಡಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಮಾತನಾಡಿ ಶಶಿಕುಮಾರ್ ರೈರವರು ಯೂನಿಯನ್ ಬ್ಯಾಂಕ್ ಅಧ್ಯಕ್ಷರಾಗಿ ಉತ್ತಮ ಕೆಲಸ ನಿರ್ವಹಿಸುತ್ತಿದ್ದಾರೆ. ಅಭಿನಂದನಾ ಕಾರ್ಯಕ್ರಮದಲ್ಲಿ ಎಲ್ಲರೂ ಒಟ್ಟಾಗಿ ಕೆಲಸ ಮಾಡಿದ್ದಾರೆ. ಕಾರ್ಯಕ್ರಮ ಯಶಸ್ಸಿಗೆ ಕಾರಣಕರ್ತರಾದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.


ಅಭಿನಂದನಾ ಸಮಿತಿಯ ಬೆಳ್ತಂಗಡಿ ತಾಲೂಕು ಸಹಸಂಚಾಲಕ ರಾಘವೇಂದ್ರ ನಾಯಕ್ ಹರ್ತ್ಯಡ್ಕ, ಕೋಶಾಧಿಕಾರಿ ಹರೀಶ್ ರೈ, ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಮೇಶ್ ಕಲ್ಪುರೆ, ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಿಕ್ರಮ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಅಭಿನಂದನಾ ಸಮಿತಿ ಪ್ರಧಾನ ಕಾರ್ಯದರ್ಶಿ, ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಿಇಒ ಜಯಪ್ರಕಾಶ್ ರೈ ಸ್ವಾಗತಿಸಿ ಲೆಕ್ಕಪತ್ರ ಮಂಡಿಸಿದರು. ಎಸ್‌ಸಿಡಿಸಿಸಿ ಬ್ಯಾಂಕ್ ಹಿರಿಯ ಮ್ಯಾನೇಜರ್ ಚಂದ್ರಪ್ರಕಾಶ್, ದರ್ಬೆ ಶಾಖಾ ಮ್ಯಾನೇಜರ್ ಕೇಶವ, ಬೆಳ್ತಂಗಡಿ ಶಾಖಾ ವ್ಯವಸ್ಥಾಪಕ ಸುಽರ್ ಕುಮಾರ್, ಕಬಕ ಶಾಖೆಯ ಸೀತಾರಾಮ ಗೌಡ, ಪುತ್ತೂರು ಎಂ.ಟಿ.ರಸ್ತೆ ಶಾಖೆಯ ಮ್ಯಾನೇಜರ್ ಜಲಜಾ, ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಿಇಒ ಮಧುಕರ್ ಸಿ.ಎಚ್., ವಸೂಲಾತಿ ಅಽಕಾರಿ ಆದರ್ಶರವರು ಅತಿಥಿಗಳನ್ನು ಹೂಗುಚ್ಚ ನೀಡಿ ಗೌರವಿಸಿದರು. ಎಸ್‌ಸಿಡಿಸಿಸಿ ಬ್ಯಾಂಕ್ ಮೇಲ್ವಿಚಾರಕ ಶರತ್ ಡಿ. ವಂದಿಸಿ ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಿಇಒ ಚಂದ್ರಶೇಖರ ಪಿ. ಕಾರ್ಯಕ್ರಮ ನಿರೂಪಿಸಿದರು. ಮಧ್ಯಾಹ್ನ ಸಹಭೋಜನ ನಡೆಯಿತು.

ಸ್ಮರಣಿಕೆ ನೀಡಿ ಗೌರವಾರ್ಪಣೆ
ಅಭಿನಂದನಾ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಎಲ್ಲರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು. ಅಭಿನಂದನಾ ಸಮಿತಿ ಅಧ್ಯಕ್ಷರು, ಸಂಚಾಲಕರು, ಪದಾಧಿಕಾರಿಗಳು, ಸದಸ್ಯರು, ಹಾಗೂ ಎಸ್‌ಸಿಡಿಸಿಸಿ ಬ್ಯಾಂಕ್ ಮೇಲ್ವಿಚಾರಕರು, ಸಿಇಒ, ಸಿಬಂದಿಗಳು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು, ಮುಖ್ಯಕಾರ್ಯನಿರ್ವಹಣಾಽಕಾರಿಯವರಿಗೆ ಅಭಿನಂದನಾ ಸಮಿತಿಯಿಂದ ಸ್ಮರಣಿಕೆ ನೀಡಲಾಯಿತು.

LEAVE A REPLY

Please enter your comment!
Please enter your name here