ಪುತ್ತೂರು: ಬೈಲುಗುತ್ತು ಶಶಿಕುಮಾರ್ ರೈ ಬಾಲ್ಯೊಟ್ಟುರವರು ಬಾಲ್ಯೊಟ್ಟು ಮನೆಯಲ್ಲಿ ರಾಜನ್ ದೈವದ ಧರ್ಮನೇಮವು ಮಾ.23ರಂದು ನಡೆಯಲಿದೆ.ಮಾ.22ರಂದು ಅಪರಾಹ್ನ ಶ್ರೀ ರಣಮಂಗಲ ಸುಬ್ರಹ್ಮಣ್ಯೇಶ್ವರ ಕ್ಷೇತ್ರದಿಂದ ದೈವಗಳ ಭಂಡಾರ ಶ್ರೀ ವಿಷ್ಣುಮೂರ್ತಿ ದೇವಾಲಯಕ್ಕೆ ಆಗಮಿಸಿ ರಾತ್ರಿ ಶ್ರೀ ಕ್ಷೇತ್ರದಲ್ಲಿ ದೈವಗಳ ತಂಬಿಲ ಸೇವೆ ಹಾಗೇ ಶ್ರೀ ಕ್ಷೇತ್ರದಲ್ಲಿ ಶ್ರೀ ವಿಷ್ಣುಮೂರ್ತಿ ದೇವರಿಗೆ ರಂಗಪೂಜೆ ನಡೆಯಲಿದೆ. ಬಳಿಕ ಶ್ರೀ ಕ್ಷೇತ್ರದಿಂದ ದೈವಗಳ ಭಂಡಾರ ಬಾಲ್ಯೊಟ್ಟು ಮನೆಗೆ ಆಗಮಿಸಿ ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ಮಾ.23ರಂದು ಬೆಳಿಗ್ಗೆ 10.30ಕ್ಕೆ ಧರ್ಮದೈವದ ನೇಮ ನಡೆಯಲಿದೆ. ಬಳಿಕ ಭಕ್ತಾಧಿಗಳಿಗೆ ಪ್ರಸಾದ ವಿತರಣೆ ನಡೆದು ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ. ಅಪರಾಹ್ನ ದೈವಗಳ ಭಂಡಾರ ನಿರ್ಗಮನ ಕಾರ್ಯಕ್ರಮ ನಡೆಯಲಿದೆ. ಈ ಎಲ್ಲಾ ಕಾರ್ಯಕ್ರಮಗಳಲ್ಲೂ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೈವದ ಗಂಧಪ್ರಸಾದ ಸ್ವೀಕರಿಸುವಂತೆ ಬಾಲ್ಯೊಟ್ಟು ಮನೆಯ ಶಶಿಕುಮಾರ್ ರೈ ಬಾಲ್ಯೊಟ್ಟು ಹಾಗೂ ಕುಟುಂಬಸ್ಥರ ಪ್ರಕಟಣೆ ತಿಳಿಸಿದೆ.