
ವಿಟ್ಲ: ಕಣಚೂರ್ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರ, ಕಣಚೂರು ಇಸ್ಲಾಮಿಕ್ ಎಡ್ಯೂಕೇಶನ್ ಟ್ರಸ್ಟ್ ಅಡಿಯಲ್ಲಿ ಮತ್ತು ಸೈಂಟ್ ಅಲೋಯಿಷಿಯಸ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಮತ್ತು ಇನ್ಫರ್ಮೇಷನ್ ಟೆಕ್ನೋಲಜಿ ಇವರ ನಡುವೆ ಪರಸ್ಪರ ಒಪ್ಪಂದ ಪತ್ರಕ್ಕೆ ಸಹಿ ಹಾಕಲಾಯಿತು.
ಈ ಒಪ್ಪಂದದ ಮೂಲಕ ಎರಡೂ ಸಂಸ್ಥೆಗಳು ಸಂಶೋಧನೆ, ಶಿಕ್ಷಣ ಮತ್ತು ಸೃಜನಶೀಲತೆಯ ಕ್ಷೇತ್ರಗಳಲ್ಲಿ ಸಹಯೋಗವನ್ನು ಉತ್ತೇಜಿಸಲು ಹಾಗೂ ವೈದ್ಯಕೀಯ ವಿಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಎಐ ಚಾಲಿತ ಆರೋಗ್ಯ ಪರಿಹಾರಗಳನ್ನು ಅಭಿವೃದ್ಧಿಪಡಿಸಲು ಸಾಮೂಹಿಕ ಪ್ರಯತ್ನವನ್ನು ಆರಂಭಿಸಲು ನಿರ್ಧರಿಸಿದೆ
ಸೈಂಟ್ ಅಲೋಯಿಷಿಯಸ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಮತ್ತು ಇನ್ಫರ್ಮೇಷನ್ ಟೆಕ್ನೋಲಜಿ
ಪ್ರತಿನಿಧಿಯಾಗಿ ನಿರ್ದೇಶಕ ಡಾ. ಕಿರಣ್ ಕೊಠಾ
ಹಾಗೂ ಸಹಾಯಕ ಪ್ರಾಧ್ಯಾಪಕ ಡಾ. ರೂಪನ್
ಮತ್ತು ಸಾಫ್ಟ್ವೇರ್ ಟೆಕ್ನೋಲಜಿ ವಿಭಾಗದ ಮುಖ್ಯಸ್ಥರು ಕನಚೂರ್ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರದ ಪ್ರತಿನಿಧಿಯಾಗಿ ಡಾ. ಶಹ್ನವಾಜ್ ಮಣಿಪಡಿ ಮತ್ತು ಆಡಳಿತಾಧಿಕಾರಿ ಡಾ. ರೋಹನ್ ಮೊನಿಸ್ ಉಪಸ್ಥಿತರಿದ್ದರು.