ನಾಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಿಳೆಯರಿಂದ ಸಾಮೂಹಿಕ ಕುಂಕುಮಾರ್ಚನೆ

0

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿ ತಿಂಗಳು ಮಹಿಳೆಯರಿಂದಲೇ ನಡೆಯುವ ಲಲಿತಾ ಸಹಸ್ರನಾಮ ಪಠಣ ಮತ್ತು ಸಾಮೂಹಿಕ ಕುಂಕುಮಾರ್ಚನೆ ಕಾರ್ಯಕ್ರಮ ಮಾ.21ಕ್ಕೆ ಸಂಜೆ ಗಂಟೆ 4.45ಕ್ಕೆ ನಡೆಯಲಿದೆ.


ದೇವಳದ ಪ್ರಾಂಗಣದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು. ಕಾರ್ಯಕ್ರಮದಲ್ಲಿ ಭಾಗವಹಿಸುವವರು ಎರಡು ಸಣ್ಣ ಹರಿವಾಣ, ನಾಣ್ಯ, ಲಲಿತ ಸಹಸ್ರನಾಮ ಪುಸ್ತಕ ತರುವಂತೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಮತ್ತು ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್ ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here