ಕುಂತೂರು: ಮಂಗಳೂರು ವಿಶ್ವ ವಿದ್ಯಾನಿಲಯದ ಬಿ.ಇಡಿ. ವಿಭಾಗದಲ್ಲಿ 2025ರ ಫೆಬ್ರವರಿಯಲ್ಲಿ ನಡೆದ ದ್ವಿತೀಯ ಮತ್ತು ಚತುರ್ಥ ಸೆಮಿಸ್ಟರ್ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಿಂದ ಪರೀಕ್ಷೆಗೆ ಹಾಜರಾದ ಎಲ್ಲಾ ಪ್ರಶಿಕ್ಷಣಾರ್ಥಿಗಳು ಉತ್ತಮ ಅಂಕಗಳೊಂದಿಗೆ ಉತ್ತಿರ್ಣರಾಗಿದ್ದು, ದ್ವಿತೀಯ ಸೆಮಿಸ್ಟರ್‌ನಲ್ಲಿ ಶೇ. 97 ಮತ್ತು ಚತುರ್ಥ ಸೆಮಿಸ್ಟರ್‌ನಲ್ಲಿ ಶೇ. 100 ಫಲಿತಾಂಶ ಬಂದಿರುತ್ತದೆ.
ದ್ವಿತೀಯ ಸೆಮಿಸ್ಟರ್‌ನಲ್ಲಿ ಪರೀಕ್ಷೆಗೆ ಹಾಜರಾದ 37 ಪ್ರಶಿಕ್ಷಣಾರ್ಥಿಗಳಲ್ಲಿ 33 ಪ್ರಶಿಕ್ಷಣಾರ್ಥಿಗಳು ಅತಿ ವಿಶಿಷ್ಟ ಶ್ರೇಣಿಯಲ್ಲಿ ಮತ್ತು 3 ಪ್ರಶಿಕ್ಷಣಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ. ಹಲೀಮತ್ ಅಜ್ಜೀನಾ ಮತ್ತು ರಕ್ಷಾ ಕೆ ಎಂ ತಲಾ ಶೇ. 90 ಅಂಕಗಳೊಂದಿಗೆ ಪ್ರಥಮ ಸ್ಥಾನವನ್ನು, ಪ್ರತೀಕ್ಷಾ ಪಿ ಶೇ.88.83 ಅಂಕಗಳೊಂದಿಗೆ ದ್ವಿತೀಯ ಸ್ಥಾನವನ್ನು ಮತ್ತು ದೀಕ್ಷಿತಾ ಎಸ್. ಎಸ್ ಶೇ. 86.67 ಅಂಕಗಳೊಂದಿಗೆ ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ಚತುರ್ಥ ಸೆಮಿಸ್ಟರ್‌ನಲ್ಲಿ ಪರೀಕ್ಷೆಗೆ ಹಾಜರಾದ 50 ಪ್ರಶಿಕ್ಷಣಾರ್ಥಿಗಳಲ್ಲಿ 49 ಪ್ರಶಿಕ್ಷಣಾರ್ಥಿಗಳು ಅತಿ ವಿಶಿಷ್ಟ ಶ್ರೇಣಿಯಲ್ಲಿ ಮತ್ತು 1 ಪ್ರಶಿಕ್ಷಣಾರ್ಥಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ. ಪ್ರಿಯಾ ಎಮ್ ಶೇ. 95.17 ಅಂಕಗಳೊಂದಿಗೆ ಪ್ರಥಮ ಸ್ಥಾನವನ್ನು, ತೇಜಸ್ವಿನಿ ಶೇ.93.83 ಅಂಕಗಳೊಂದಿಗೆ ದ್ವಿತೀಯ ಸ್ಥಾನವನ್ನು ಮತ್ತು ಸಂಹಿತಾ ದಿವ್ಯ ಡಿ’ಜೋಜ ಶೇ. 92.50 ಅಂಕಗಳೊಂದಿಗೆ ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.