ಪುತ್ತೂರು : ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ವ್ಯಾಪ್ತಿಯ ಎಂಜಿನಿಯರಿಂಗ್ ಕಾಲೇಜುಗಳ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕೂಟದ ಮಹಿಳಾ ವಿಭಾಗ- 4*4೦೦ ಮೀಟರ್ ಹರ್ಡಲ್ಸ್ ಪ್ರಥಮ ಸ್ಥಾನ ಪಡೆದ ಕೆ.ಎ.ಅನಘಾ ಅವರನ್ನು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮೂಲಕ ಮುಕ್ರಂಪಾಡಿ ಟ್ರಸ್ಟ್‌ನ ಕಚೇರಿಯಲ್ಲಿ ಸನ್ಮಾನಿಸಲಾಯಿತು.
ಕೆ.ಎ ಅನಘಾ ಅವರು ಪುತ್ತೂರು ನಗರ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಿಲ್ ತೆಂಕಿಲ ಅವರ ಪುತ್ರಿ. ಸನ್ಮಾನ ಸಂದರ್ಭ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸಂಚಾಲಕ ಅರುಣ್ ಕುಮಾರ್ ಪುತ್ತಿಲ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತಾ, ಸೇವಾ ಟ್ರಸ್ಟ್ ಅಧ್ಯಕ್ಷ ಮಹೇಂದ್ರ ವರ್ಮಾ, ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಉಮೇಶ್ ಕೊಡಿಬೈಲ್, ನಗರ ಮಂಡಲದ ಪ್ರಧಾನಕಾರ್ಯದರ್ಶಿ ಅನಿಲ್ ತೆಂಕಿಲ, ಸೇವಾ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ರವಿ ಕುಮಾರ್ ಮಠ, ಟೌನ್ ಬ್ಯಾಂಕ್ ನಿರ್ದೇಶಕ ರಾಜು ಶೆಟ್ಟಿ, ಒಬಿಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿ ಮರುವಾಳ, ಪ್ರವೀಣ್ ಭಂಡಾರಿ, ಶನ್ಮಿತ್ ರೈ ಕುಂಬ್ರ , ಪ್ರಜ್ವಲ್ ಘಾಟೆ, ಮನೀಶ್ ಕುಲಾಲ್, ಪ್ರಕಾಶ್ ಚಿಕ್ಕಮುಡ್ನೂರು, ಶ್ರೀಕಾಂತ್ ಆಚಾರ್, ಉದಯ ಬಲ್ಲಾಳ್ ಉಪಸ್ಥಿತರಿದ್ದರು.
Home ಇತ್ತೀಚಿನ ಸುದ್ದಿಗಳು ರಾಜ್ಯಮಟ್ಟದ ಅಥ್ಲೆಟಿಕ್ಸ್: ಪ್ರಥಮ ಸ್ಥಾನ ಪಡೆದ ಕೆ.ಎ ಅನಘಾ ಅವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನಿಂದ...