ಪುತ್ತೂರು: ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರವಾದ ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಸಂಸ್ಥೆಯ ಸಂಚಾಲಕರಾದ ಸವಣೂರು ಕೆ. ಸೀತಾರಾಮ ರೈ ಯವರು ದೀಪ ಪ್ರಜ್ವಲನೆಯ ಮೂಲಕ ಪರೀಕ್ಷೆಗೆ ಚಾಲನೆ ನೀಡಿ ಮಕ್ಕಳಿಗೆ ಶುಭ ಹಾರೈಸಿದರು. ಆಡಳಿತಾಧಿಕಾರಿ ಅಶ್ವಿನ್ ಎಲ್ ಶೆಟ್ಟಿ, ಪ್ರಾಂಶುಪಾಲೆ ಶಶಿಕಲಾ ಎಸ್ ಆಳ್ವ, ಪರೀಕ್ಷಾ ಅಧೀಕ್ಷಕರಾದ ಪ್ರೇಮ್ ಕುಮಾರ್, ಉಪ ಅಧೀಕ್ಷಕರಾದ ಲಕ್ಷ್ಮಿ, ಪ್ರಶ್ನೆಪತ್ರಿಕೆ ಅಭಿರಕ್ಷಕರಾದ ಸತೀಶ್ ಉಪಸ್ಥಿತರಿದ್ದರು.