ಪುತ್ತೂರು: ದ.ಕ ಗ್ಯಾರೇಜ್ ಮಾಲಕರ ಸಂಘ(ದ.ಕ ಮತ್ತು ಉಡುಪಿ ಜಿಲ್ಲೆ)ದ ಪುತ್ತೂರು ವಲಯದ ವಾರ್ಷಿಕ ಮಹಾಸಭೆ, ಪದಪ್ರದಾನ ಹಾಗೂ ನೂತನ ಜಿಲ್ಲಾಧ್ಯಕ್ಷರ ಭೇಟಿ ಕಾರ್ಯಕ್ರಮ ಮಾ.23 ರಂದು ಬೆಳಿಗ್ಗೆ ಮಿನಿ ವಿಧಾನಸೌಧದ ಬಳಿಯ ರೋಟರಿ ಮನೀಷಾ ಸಭಾಂಗಣದಲ್ಲಿ ಜರಗಲಿದೆ.
ಪುತ್ತಿಲ ಪರಿವಾರ ಟ್ರಸ್ಟ್ ಸ್ಥಾಪಕರಾದ ಅರುಣ್ ಕುಮಾರ್ ಪುತ್ತಿಲರವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ದ.ಕ ಗ್ಯಾರೇಜ್ ಮಾಲಕರ ಸಂಘದ ಪುತ್ತೂರು ವಲಯದ ಅಧ್ಯಕ್ಷ ಕಿಶೋರ್ ಕುಮಾರ್ ಬಿ.ರವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ದ.ಕ ಮತ್ತು ಉಡುಪಿ ಜಿಲ್ಲೆಯ ದ.ಕ ಗ್ಯಾರೇಜ್ ಮಾಲಕರ ಸಂಘ ಮಂಗಳೂರು ಇದರ ಚೇರ್ಮನ್ ದಿವಾಕರ್ ಎಂ, ಪುತ್ತೂರು ಅಂಚೆ ವಿಭಾಗದ ಮಾರ್ಕೆಟಿಂಗ್ ಮ್ಯಾನೇಜರ್ ಗುರುಪ್ರಸಾದ್ ಕೆ.ಎಸ್, ಗೌರವ ಉಪಸ್ಥಿತಿಯಾಗಿ ದ.ಕ ಮತ್ತು ಉಡುಪಿ ಜಿಲ್ಲೆಯ ದ.ಕ ಗ್ಯಾರೇಜ್ ಮಾಲಕರ ಸಂಘ ಮಂಗಳೂರು ಮಾಜಿ ಚೇರ್ಮನ್ ಜಿ.ಪುಂಡಲೀಕ ಸುವರ್ಣ, ದ.ಕ ಜಿಲ್ಲಾ ಗ್ಯಾರೇಜ್ ಮಾಲಕರ ಸೌಹಾರ್ದ ಸಹಕಾರಿ ಸಂಘ ಮಂಗಳೂರು ಇದರ ಅಧ್ಯಕ್ಷ ಎ.ಜನಾರ್ದನ, ದ.ಕ ಮತ್ತು ಉಡುಪಿ ಜಿಲ್ಲೆಯ ದ.ಕ ಗ್ಯಾರೇಜ್ ಮಾಲಕರ ಸಂಘ ಮಂಗಳೂರು ಅಧ್ಯಕ್ಷ ದಿನಕರ ಕುಲಾಲ್, ಕಾರ್ಯದರ್ಶಿ ಕೆ.ಎ ರಾಜ್ ಗೋಪಾಲ, ಕೋಶಾಧಿಕಾರಿ ಕಿರಣ್ ರಾಜ್ ರವರು ಭಾಗವಹಿಸಲಿದ್ದಾರೆ ಎಂದು ಪುತ್ತೂರು ವಲಯದ ಗೌರವಾಧ್ಯಕ್ಷ ಸುರೇಶ್ ಸಾಲ್ಯಾನ್, ಅಧ್ಯಕ್ಷ ಕಿಶೋರ್ ಕುಮಾರ್ ಬಿ, ಕಾರ್ಯದರ್ಶಿ ಸುನಿಲ್ ಡಿ.ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.