ಆಲಂಕಾರು: ಸೀಮಾ ದೇವಸ್ಥಾನ ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಮಾ.14 ರಿಂದ ಮಾ.24 ರ ವರೆಗೆ ನಡೆಯಲಿದ್ದು, ಮಾ. 21ರಂದು ಬೆಳಿಗ್ಗೆ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಮಹಾಪೂಜೆ, ನಿತ್ಯಬಲಿ, ಪ್ರಸಾದ ವಿತರಣೆ, ಮಹಾಅನ್ನಸಂತರ್ಪಣೆ ನಡೆಯಿತು. ಸಂಜೆ 6.30ರಿಂದ ಸವಾರಿ ಮಂಟಪ ಕಟ್ಟೆಪೂಜೆಗಳು, ಕೆರೆ ಉತ್ಸವ, ಉತ್ಸವ, ವಸಂತ ಕಟ್ಟೆಪೂಜೆ, ಮಹಾಪೂಜೆ, ಭೂತಬಲಿ, ಪ್ರಸಾದ ವಿತರಣೆ ನಡೆಯಿತು. ಮಾ. 22ರಂದು ಬೆಳಿಗ್ಗೆ ಬಲಿ ಹೊರಟು ಉತ್ಸವ, ಆಶ್ಲೇಷ ಬಲಿ, ಮಧ್ಯಾಹ್ನ ಮಹಾಪೂಜೆ, ನಿತ್ಯಬಲಿ, ಪ್ರಸಾದ ವಿತರಣೆ ಅಪರಾಹ್ನ 2 ರಿಂದ ಶ್ರೀ ದುರ್ಗಾಂಬಾ ಕಲಾ ಸಂಗಮ ಶ್ರೀ ಕ್ಷೇತ್ರ ಶರವೂರು ಇವರ ವತಿಯಿಂದ ಜಿಲ್ಲೆಯ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ, ಇಷ್ಟಾರ್ಥ ಸಿದ್ಧಿಗೆ ಯಕ್ಷಗಾನ ತಾಳಮದ್ದಳೆ ಸೇವೆ ನಡೆಯಲಿದೆ.

ಪ್ರಸಂಗ ಕೌಶಿಕ ಚರಿತ್ರೆ ಭಾಗವತರಾಗಿ ಮಹೇಶ್ ಕನ್ಯಾಡಿ ಚೆಂಡೆ ಮದ್ದಳೆಯಲ್ಲಿ ಭಾಸ್ಕರ ಕೋಳ್ಯೂರು, ಶಿಕಿನ್ ಶರ್ಮ ಬೆಂಗಳೂರು, ಪದ್ಮರಾಜ ತಂತ್ರಿಗಳು. ಮುಮ್ಮೆಳದಲ್ಲಿ ಅಂಬಾ ಪ್ರಸಾದ್ ಪಾತಾಳ, ರಾಧಾಕೃಷ್ಣ ಕಲ್ಚಾರ್, ಗಣರಾಜ ಕುಂಬ್ಳೆ, ದಿನೇಶ್ ಶೆಟ್ಟಿ ಕಾವಳಕಟ್ಟೆ, ಗಣೇಶ್ ಶೆಟ್ಟಿ ಕನ್ನಡಿಕಟ್ಟೆ ಭಾಗವಹಿಸಲಿದ್ದಾರೆ.ನಂತರ ರಾತ್ರಿ 7ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ.
ಶ್ರೀ ಕ್ಷೇತ್ರ ಶರವೂರಿನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಸುಬ್ರಹ್ಮಣ್ಯ ರಾವ್ ನಗ್ರಿ ಸಭಾಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ದ.ಕ ಲೋಕ ಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ,ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ,ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ,ರಾಜ್ಯ ಧಾರ್ಮಿಕ ಪರಿಷತ್ ನ ಸದಸ್ಯರಾದ ಮಲ್ಲಿಕಾ ಪಕಳ, ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಬೊಟ್ಯಾಡಿ,ಕಡಬ ತಾ.ಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ,ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಪುತ್ತೂರಿನ ಅಧ್ಯಕ್ಷರಾದ ಗಣರಾಜ್ ಕುಂಬ್ಳೆ,ಶ್ರೀ ಕ್ಷೇತ್ರ ಶರವೂರಿನ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಹೇಮಂತ್ ರೈ ಮನವಳಿಕೆಗುತ್ತು ಇವರ ಉಪಸ್ಥಿತಿಯಲ್ಲಿ ಧಾರ್ಮಿಕ ಸಭೆ ನಡೆಯಲಿದೆ ನಂತರ ಮಹಾರಥೋತ್ಸವ,ವಸಂತ ಕಟ್ಟೆ ಪೂಜೆ,ಭೂತಬಲಿ ಕವಾಟಬಂಧನ ನಡೆಯಲಿದೆ. ರಾತ್ರಿ 10ರಿಂದ ಶ್ರೀ ಕ್ಷೇತ್ರದ ರಥಬೀದಿಯಲ್ಲಿ ಮಂಗಳೂರು ಶ್ರೀ ಲಲಿತೆ ಕಲಾವಿದರ್ ಇವರಿಂದ ಶನಿ ಮಹಾತ್ಮೆ ಪೌರಾಣಿಕ ನಾಟಕ ಪ್ರದರ್ಶನಗೊಳ್ಳಲಿದೆ.