ಬೈಕ್ ಡಿಕ್ಕಿಯಾಗಿ ಪಾದಚಾರಿ ಮೃತ್ಯು – ಪ್ರಕರಣದ ಆರೋಪಿ ದೋಷಮುಕ್ತ

0

ಪುತ್ತೂರು: ಕಡಬ ನೂಜಿಬಾಳ್ತಿಲದಲ್ಲಿ 8 ವರ್ಷಗಳ ಹಿಂದೆ ಬೈಕ್ ಡಿಕ್ಕಿಯಾಗಿ ಪಾದಚಾರಿ ಕೂಲಿ ಕಾರ್ಮಿಕ ಮಹಿಳೆಯೋರ್ವರು ಮೃತಪಟ್ಟ ಪ್ರಕರಣದ ಆರೋಪಿಯನ್ನು ಪುತ್ತೂರು ನ್ಯಾಯಾಲಯ ದೋಷಮುಕ್ತಗೊಳಿಸಿ ತೀರ್ಪು ನೀಡಿದೆ. ನೂಜಿಬಾಳ್ತಿಲ ಗ್ರಾಮದ ಬೇರಿಕೆ ನಿವಾಸಿ ಹೊನ್ಮಮ್ಮ(59ವ)ರವರು ಅಪಘಾತದಿಂದಾಗಿ ಮೃತಪಟ್ಟಿದ್ದರು.ಅವರು ಕೂಲಿ ಕೆಲಸಕ್ಕಾಗಿ ಪೆರಿಯಶಾಂತಿ ಮರ್ದಾಳ ರಾಜ್ಯ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಹಿಂದುಗಡೆಯಿಂದ ಬಲ್ಯದ ಪ್ರಶಾಂತ್ ಕುಮಾರ್ ಕೆ ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ ಬೈಕ್ ಅವರಿಗೆ ಡಿಕ್ಕಿಯಾಗಿತ್ತು. ಅಪಘಾತದಿಂದ ತೀವ್ರ ಗಾಯಗೊಂಡ ಹೊನ್ನಮ್ಮ ಅವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ದಾರಿಮಧ್ಯೆ ಮೃತಪಟ್ಟಿದ್ದರು. ಘಟನೆಗೆ ಸಂಬಂಧಿಸಿ ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಬೈಕ್ ಸವಾರ ಪ್ರಶಾಂತ್ ಅವರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಯನ್ನು ದೋಷಮುಕ್ತಗೊಳಿಸಿ ತೀರ್ಪು ನೀಡಿದೆ. ಆರೋಪಿ ಪರ ವಕೀಲರಾದ ಮಾಧವ ಪೂಜಾರಿ, ರಾಕೇಶ್ ಬಲ್ನಾಡು, ಮಮತಾ ಶೆಟ್ಟಿ ವಾದಿಸಿದ್ದರು.

LEAVE A REPLY

Please enter your comment!
Please enter your name here