ವಿಟ್ಲ: ಪಾಳುಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆ

0

ವಿಟ್ಲ: ಇಲ್ಲಿನ ಖಾಸಗಿ ಬಸ್ ನಿಲ್ದಾಣದ ಬಳಿ ಪಟ್ಟಣ ಪಂಚಾಯತ್ ಹಿಂಭಾಗದಲ್ಲಿರುವ ಜಮೀನಿನ ಪಾಳು ಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಕೆರೆಯೊಳಗಿಂದ ದುರ್ನಾತ ಬಂದ ಹಿನ್ನೆಲೆಯಲ್ಲಿ ವಿಟ್ಲ ಠಾಣಾ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ವಿಟ್ಲ ಠಾಣಾ ಇನ್ಸ್‌ಪೆಕ್ಟರ್ ಹೆಚ್.ಇ.ನಾಗರಾಜ್ ರವರ ನೇತೃತ್ವದ ಪೊಲೀಸರ ತಂಡ ಆಗಮಿಸಿ ಮಾಹಿತಿ ಸಂಗ್ರಹಿಸಿದೆ.

ಮೃತದೇಹವನ್ನು ಮುರಳೀಧರ ನೇತೃತ್ವದ ತಂಡ ಮೇಲಕ್ಕೆತ್ತಿದೆ. ಮೃತದೇಹ ಸಂಪೂರ್ಣ ಕೊಳೆತು ಹೋಗಿದ್ದು, ಗುರುತು ಪತ್ತೆಹಚ್ಚಲು ಅಸಾಧ್ಯವಾದ ಸ್ಥಿತಿ ತಲುಪಿದೆ. ಗುರುತು ಪತ್ತೆಯಾಗದ ಹಿನ್ನೆಲೆಯಲ್ಲಿ ಮೃತದೇಹದ ಅವಶೇಷವನ್ನು ವಿಧಿವಿಜ್ಞಾನ ಪರೀಕ್ಷೆಗಾಗಿ ದೇರಳಕಟ್ಟೆಯ ಆಸ್ಲತ್ರೆಗೆ ರವಾನಿಸಲಾಗಿದೆ.

LEAVE A REPLY

Please enter your comment!
Please enter your name here