
ಪುತ್ತೂರು: ಕೋಡಿಂಬಾಡಿ ಗ್ರಾಮದ ಕೋಡಿ ಎಂಬಲ್ಲಿರುವ ಪುತ್ತೂರು ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಕೆ. ಜಯಾನಂದರವರಿಗೆ ಸೇರಿದ ಅಕೇಶಿಯಾ ಮತ್ತು ಗೇರು ನೆಡುತೋಪು ಗುಡ್ಡೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯುಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಮಾ.22ರಂದು ಸಂಜೆ ನಡೆದಿದೆ. ಪುತ್ತೂರು ಅಗ್ನಿಶಾಮಕ ದಳದವರು ಬೆಂಕಿ ನಂದಿಸಿದ್ದಾರೆ.
