ಪುತ್ತೂರು: ಬಂಟ್ವಾಳ ತಾಲೂಕಿನ ಬೋಳಂತೂರು ನಾರ್ಶ ನಿವಾಸಿಯಾಗಿದ್ದು ಬೀಡಿ ಉದ್ಯಮಿಯಾಗಿರುವ ಸುಲೈಮಾನ್ ಹಾಜಿಯವರ ಮನೆಗೆ ಇ.ಡಿ. ಅಧಿಕಾರಿಗಳ ಸೋಗಿನಲ್ಲಿ ಬಂದು ಲಕ್ಷಾಂತರ ರೂಪಾಯಿ ದರೋಡೆ ನಡೆಸಿದ ಪ್ರಕರಣದಲ್ಲಿ ಸರಕಾರದ ಪರ ವಾದಿಸಲು ಮಂಗಳೂರು ವಲಯದ ಹಿರಿಯ ಕಾನೂನು ಅಧಿಕಾರಿ ಕೆ. ಶಿವಪ್ರಸಾದ್ ಆಳ್ವ ನೇಮಕಗೊಂಡಿದ್ದಾರೆ.
ದರೋಡೆ ಕೃತ್ಯಕ್ಕೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡಿರುವ ವಿಟ್ಲ ಠಾಣಾ ಪೊಲೀಸರು ಈಗಾಗಲೇ ಹಲವರನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಈ ದರೋಡೆ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರಕಾರ ಪ್ರಾಸಿಕ್ಯೂಶನ್ ಪರ ವಾದಿಸಲು ಶಿವಪ್ರಸಾದ್ ಆಳ್ವರವನ್ನು ವಿಶೇಷ ಸರಕಾರಿ ಅಭಿಯೋಜಕರಾಗಿ ನೇಮಕಗೊಳಿಸಿದೆ. ಪುತ್ತೂರು ಕಾವೇರಿಕಟ್ಟೆ ಮೂಲದವರಾಗಿದ್ದು ಪ್ರಸ್ತುತ ಮಂಗಳೂರು ವಲಯದ ಹಿರಿಯ ಕಾನೂನು ಅಧಿಕಾರಿ ಆಗಿರುವ ಶಿವಪ್ರಸಾದ್ ಆಳ್ವ ಅವರು ಹಲವಾರು ಕ್ಲಿಷ್ಟಕರ ಪ್ರಕರಣಗಳಲ್ಲಿ ಸರಕಾರದ ಪರ ವಾದ ಮಂಡಿಸಿ ಅಪರಾಧಿಗಳಿಗೆ ಶಿಕ್ಷೆ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
Home ಇತ್ತೀಚಿನ ಸುದ್ದಿಗಳು ಬೀಡಿ ಉದ್ಯಮಿಯ ಮನೆಗೆ ಇ.ಡಿ.ಅಧಿಕಾರಿಗಳ ಸೋಗಿನಲ್ಲಿ ಬಂದು ದರೋಡೆ ನಡೆಸಿದ ಪ್ರಕರಣ – ಪ್ರಾಸಿಕ್ಯೂಶನ್ ಪರ...