ಪುತ್ತೂರು: ಪುತ್ತೂರು ನಗರಸಭೆಯ ಸಮುದಾಯ ಭವನದಲ್ಲಿ ಕಾರ್ಯಾಚರಿಸುತ್ತಿರುವ ಹಿರಿಯ ನಾಗರಿಕರ ಹಿತರಕ್ಷಣಾ ಸಂಘದ ವಾರ್ಷಿಕ ಮಹಾಸಭೆಯು ಮಾ.24 ರಂದು ನಗರಸಭಾ ಸಮುದಾಯ ಭವನದಲ್ಲಿ ಬೆಳಿಗ್ಗೆ ಜರಗಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ನಾಗರಿಕರ ಹಿತರಕ್ಷಣಾ ಸಂಘದ ಅಧ್ಯಕ್ಷ ಝೇವಿಯರ್ ಡಿ’ಸೋಜರವರು ವಹಿಸಿಕೊಳ್ಳಲಿದ್ದಾರೆ. ಸಂಘದ ಸದಸ್ಯರು ಸಭೆಯಲ್ಲಿ ಹಾಜರಿದ್ದು ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಸಹಕರಿಸಬೇಕು ಎಂದು ಹಿರಿಯ ನಾಗರಿಕರ ಹಿತರಕ್ಷಣಾ ಸಂಘದ ಕಾರ್ಯದರ್ಶಿ ಯಶೋಧ ಪಿ, ಕೋಶಾಧಿಕಾರಿ ಜಯಂತಿ ನಾಯ್ಕರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.