ಪುತ್ತೂರು: ಬೈಲುಗುತ್ತು ಶಶಿಕುಮಾರ್ ರೈ ಬಾಲ್ಯೊಟ್ಟುರವರ ಬಾಲ್ಯೊಟ್ಟು ಮನೆಯಲ್ಲಿ ರಾಜನ್ ದೈವದ ಧರ್ಮನೇಮ ಮಾ.23ರಂದು ನಡೆಯಿತು. ಮಾ.22 ರಂದು ಅಪರಾಹ್ನ ಶ್ರೀರಣಮಂಗಲ ಸುಬ್ರಹ್ಮಣ್ಯೇಶ್ವರ ಕ್ಷೇತ್ರದಿಂದ ದೈವಗಳ ಭಂಡಾರ ಶ್ರೀವಿಷ್ಣುಮೂರ್ತಿ ದೇವಾಲಯಕ್ಕೆ ಆಗಮಿಸಿ ದೇವಾಲಯದಲ್ಲಿ ರಾತ್ರಿ ದೈವಗಳ ತಂಬಿಲ ಸೇವೆ, ಶ್ರೀವಿಷ್ಣುಮೂರ್ತಿ ದೇವರಿಗೆ ರಂಗಪೂಜೆ ನಡೆಯಿತು. ಬಳಿಕ ದೇವಾಲಯದಿಂದ ದೈವಗಳ ಭಂಡಾರ ಬಾಲ್ಯೊಟ್ಟು ಮನೆಗೆ ಆಗಮಿಸಿ ಬಳಿಕ ಅನ್ನಸಂತರ್ಪಣೆ ನಡೆಯಿತು.

ಮಾ.23 ರಂದು ಬೆಳಿಗ್ಗೆ 10.30ರಿಂದ ರಾಜನ್ ದೈವದ ಧರ್ಮನೇಮ ನಡೆಯಿತು. ಭಕ್ತಾದಿಗಳಿಗೆ ಪ್ರಸಾದ ವಿತರಣೆ ನಡೆದು ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ಅಪರಾಹ್ನ ದೈವಗಳ ಭಂಡಾರ ನಿರ್ಗಮನ ಕಾರ್ಯಕ್ರಮ ನಡೆಯಿತು.
ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಅಶೋಕ್ ಕುಮಾರ್ ರೈ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ, ಮಾಜಿ ಶಾಸಕ ಸಂಜೀವ ಮಠಂದೂರು, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಎಸ್.ಬಿ.ಜಯರಾಮ ರೈ ಬಳೆಜ್ಜ, ಮಾಸ್ ಸಂಸ್ಥೆಯ ಅಧ್ಯಕ್ಷ ಸೀತಾರಾಮ ರೈ ಸವಣೂರು, ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ.ಯು.ಪಿ.ಶಿವಾನಂದ ಹಾಗೂ ಪುತ್ತೂರು, ಕಡಬ, ಸುಳ್ಯ ತಾಲೂಕುಗಳ ವಿವಿಧ ಕ್ಷೇತ್ರದ ಗಣ್ಯರು ಸೇರಿದಂತೆ ಸುಮಾರು 2ಸಾವಿರಕ್ಕೂ ಮಿಕ್ಕಿ ಭಕ್ತಾದಿಗಳು ಭಾಗವಹಿಸಿದ್ದರು. ಶಶಿಕುಮಾರ್ ರೈ ಬಾಲ್ಯೊಟ್ಟು ಹಾಗೂ ಮನೆಯವರು ಸ್ವಾಗತಿಸಿದರು.