ರಾಮಕುಂಜ: ಕೊಲ ಗ್ರಾಮದ ಆತೂರು ಶ್ರೀ ಸದಾಶಿವ ದೇವಸ್ಥಾನದಲ್ಲಿ ಮಾ.23ರಂದು ಪ್ರತಿಷ್ಠಾ ಮಹೋತ್ಸವ ನಡೆಯಿತು.
ಬೆಳಿಗ್ಗೆ ಗಣಪತಿಹೋಮ, ಪಂಚವಿಶಂತಿ ಕಲಷಾಭಿಷೇಕ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ಶ್ರೀ ನಾಗದೇವರಿಗೆ ಆಶ್ಲೇಷ ಬಲಿ, ಕಲಶಾಭಿಷೇಕ, ನಾಗತಂಬಿಲ, ದೈವಗಳ ಸನ್ನಿಧಿಯಲ್ಲಿ ಕಲಾಶಾಭಿಷೇಕ, ತಂಬಿಲ, ಶ್ರೀ ಸದಾಶಿವ ದೇವರಿಗೆ ಮಹಾಪೂಜೆ, ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು. ಬ್ರಹ್ಮಶ್ರೀ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ದೇವಸ್ಥಾನದ ಪವಿತ್ರಪಾಣಿ ವೆಂಕಟ್ರಮಣ ಕುದ್ರೆತ್ತಾಯ, ಅರ್ಚಕ ವಿಷ್ಣುಮೂರ್ತಿ ಬಡೆಕ್ಕಿಲ್ಲಾಯ ಸೇರಿದಂತೆ ಅರ್ಚಕ ವೃಂದ ಧಾರ್ಮಿಕ ವಿಧಿವಿಧಾನವನ್ನು ನೆರವೇರಿಸಿದರು.
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನೀರಜ್‌ಕುಮಾರ್ ರೈ ಅರುವಾರ ಬಾಳಿಕೆ, ಸದಸ್ಯರಾದ ಯತೀಶ್ ಗುಂಡಿಜೆ, ಸುನಿತ್‌ರಾಜ್ ಶೆಟ್ಟಿ ಬಂತೆಜಾಲು, ಶ್ರೀಧರ ಪೂಜಾರಿ ತುಂಬೆತ್ತಡ್ಕ, ಸಂಜೀವ ಸುದೆಂಗಳ, ಗೋಪಾಲ ನಾಯ್ಕ ಸೀಗೆತ್ತಡಿ, ಮೀನಾಕ್ಷಿ ಕೆ ಮುಂಡೈಮಾರ್, ಸುಜಾತ ಜೆ ಶೆಟ್ಟಿ ಬಡಿಲ, ಉತ್ಸವ ಸಮಿತಿ ಅಧ್ಯಕ್ಷ ಧರ್ಣಪ್ಪ ಗೌಡ ಕೊರಿಕ್ಕಾರು, ಪ್ರಧಾನ ಕಾರ್ಯದರ್ಶಿ ವಿನೋದ್ ಕುಮಾರ್ ಪಲ್ಲಡ್ಕ, ಅಭಿವೃದ್ದಿ ಸಮಿತಿ ಅಧ್ಯಕ್ಷ ಶೀನಪ್ಪ ಗೌಡ ವಳಕಡಮ, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಯದುಶ್ರೀ ಆನೆಗುಂಡಿ ಸೇರಿದಂತೆ ವಿವಿಧ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
