ಪುತ್ತೂರು: ಮಧೂರು ಶ್ರೀ ಮದನಂತೇಶ್ವರ – ಸಿದ್ಧಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಪುತ್ತೂರಿನ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಹೊರೆಕಾಣಿಕೆ ಮೆರವಣಿಗೆಯು ಮಾ.30ರಂದು ಹೊರಡಲಿದೆ.
ಮಧೂರು ಶ್ರೀ ಮದನಂತೇಶ್ವರ – ಸಿದ್ಧಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪುತ್ತೂರು ಸಮಿತಿಯ ಗೌರವಾಧ್ಯಕ್ಷರಾಗಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕ ಸಂಜೀವ ಮಠಂದೂರುರವರ ನೇತೃತ್ವದಲ್ಲಿ ನಡೆಯುವ ಹೊರೆಕಾಣಿಕೆ ಕಾರ್ಯಕ್ರಮಕ್ಕೆ ಪುತ್ತೂರು ಆಸುಪಾಸಿನ ಭಕ್ತರು ಹೊರೆಕಾಣಿಕೆ ವಾಹನಗಳೊಂದಿಗೆ ಸಹಕರಿಸಿ ಯಶಸ್ವಿಗೊಳಿಸುವಂತೆ ಪುತ್ತೂರು ಸಮಿತಿ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಹೊರೆಕಾಣಿಕೆ ಸಂಚಾಲಕ ಗಿರೀಶ್ ಮೊ: 9902050100, ಪುತ್ತೂರು ಸಮಿತಿ ಪ್ರಧಾನ ಕಾರ್ಯದರ್ಶಿ ಸುಧೀರ್ ಕಲ್ಲಾರೆ ಮೊ: 9164812704 ರನ್ನು ಸಂಪರ್ಕಿಸಲು ಅವರು ತಿಳಿಸಿದ್ದಾರೆ.