ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ವಿದ್ಯಾಭಾರತಿ ಉಚ್ಚ ಶಿಕ್ಷಣ ಸಂಸ್ಥಾನ್ ಇದರ ವತಿಯಿಂದ “ಭಾರತ್ ಭೋದ್ ಮಾಲಾ” ಕಾರ್ಯಕ್ರಮ ನಡೆಯಿತು .ಈ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ ವಿವೇಕಾನಂದ ಬಿಎಡ್ ಕಾಲೇಜಿನ ಪ್ರಾಂಶುಪಾಲ ಶೋಭಿತ ಸತೀಶ್ ಹಾಗೂ ಮಾತನಾಡಿ “ಜೀವನದಲ್ಲಿ ನಿರಂತರವಾಗಿ ಕಲಿಯುವುದೇ ಶಿಕ್ಷಣ ತಾಂತ್ರಿಕ ಶಿಕ್ಷಣದ ಜೊತೆಗೆ ಮೌಲ್ಯಯುತ ಶಿಕ್ಷಣದ ಜ್ಞಾನವನ್ನು ವಿದ್ಯಾರ್ಥಿಗಳಲ್ಲಿ ಬಿಂಬಿಸುವ ಕಾರ್ಯಕ್ರಮವೇ “ಭಾರತ್ ಭೋದ್ ಮಾಲ” ಕಟ್ಟಡದ ಚೌಕಟ್ಟಿನೊಳಗಿನ ಶಿಕ್ಷಣದಿಂದ ವಿದ್ಯಾರ್ಥಿಯ ಬೌದ್ಧಿಕ ಬೆಳವಣಿಗೆಯ ಜೊತೆಗೆ ಸಾಂಸ್ಕೃತಿಕ ಸಾಮಾಜಿಕ ಹಾಗೂ ಆರ್ಥಿಕ ಬೆಳವಣಿಗೆ ಆಗಬೇಕು ಈ ನಿಟ್ಟಿನಲ್ಲಿ ಪಂಚಕೋಶ ಶಿಕ್ಷಣ ಪದ್ಧತಿ ಬಗ್ಗೆ ವಿವರಿಸಿ ಪಂಚಕೋಶವೆಂದರೆ ಅನ್ನಮಯ ಪ್ರಾಣಮಯ ಮನೋಮಯ ವಿಜ್ಞಾನಮಯ ಆನಂದಮಯದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು”.
ಈ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷರಾದ ವಿಶ್ವೇಶ್ವರ ಭಟ್ ಬಂಗಾರಡ್ಕ ಹಾಗೂ ಸದಸ್ಯರಾದ ರವಿ ಮುಂಗ್ಲಿ ಮನೆ ಉಪಸ್ಥಿತರಿದ್ದರು.ದ್ವಿತೀಯ ಕಂಪ್ಯೂಟರ್ ವಿಭಾಗದ ವಿದ್ಯಾರ್ಥಿನಿಯರಾದ ಸುಜನ್ಯ ತಂಡದವರು ಪ್ರಾರ್ಥಿಸಿದರು. ಕಾಲೇಜಿನ ಪ್ರಾಂಶುಪಾಲ ಮುರಳೀಧರ್ ಯಸ್ ಇವರು ನಡೆಸಿಕೊಟ್ಟರು.ಮೆಕ್ಯಾನಿಕಲ್ ವಿಭಾಗದ ಉಪನ್ಯಾಸಕರಾದ ಪ್ರಶಾಂತ್ ಕೆ ವಂದಿಸಿದರು. ಆಟೋಮೊಬೈಲ್ ವಿಭಾಗದ ಉಪನ್ಯಾಸಕರಾದ ಗುರುರಾಜ್ ಕಾರ್ಯಕ್ರಮ ನಿರೂಪಿಸಿದರು.