ಇಂದಿನ ಕಾರ್ಯಕ್ರಮ (24/03/2025)

0

ಪುತ್ತೂರು ಮುಳಿಯ ಕೇಶವ ಭಟ್ & ಸನ್ಸ್ ಜ್ಯುವೆಲ್ಸ್‌ನಲ್ಲಿ ಡೈಮಂಡ್ ಫೆಸ್ಟ್
ಪುತ್ತೂರು ನಗರಸಭಾ ಸಮುದಾಯ ಭವನದಲ್ಲಿ ಬೆಳಿಗ್ಗೆ ೯.೩೦ಕ್ಕೆ ಹಿರಿಯ ನಾಗರಿಕರ ಹಿತರಕ್ಷಣಾ ಸಂಘದ ವಾರ್ಷಿಕ ಮಹಾಸಭೆ
ತೆಂಕಿಲ ಒಕಲಿಗ ಗೌಡ ಸಮುದಾಯ ಭವನದಲ್ಲಿ ಸಂಜೆ ೬ರಿಂದ ಎಫ್‌ಸಿ-ಪುತ್ತೂರು ಉದ್ಯಮಿ ಒಕ್ಕಲಿಗ ಮಹಾಸಭೆ
ನೆಹರುನಗರ ವಿವೇಕಾನಂದ ಸ್ವಾಯತ್ತ ಮಹಾವಿದ್ಯಾಲಯದ ಆವರಣದಲ್ಲಿ ಬೆಳಿಗ್ಗೆ ೧೦ರಿಂದ ಕಾಲೇಜು ವಾರ್ಷಿಕೋತ್ಸವ, ಮಧ್ಯಾಹ್ನ ೧೨.೩೦ರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು
ನೆಹರುನಗರ ಕಲ್ಲೇಗ ಗೌಡ ತರವಾಡು ಮನೆಯಲ್ಲಿ ಬೆಳಿಗ್ಗೆ ಧರ್ಮದೈವ ರುದ್ರಚಾಮುಂಡಿಯ ನೇಮೋತ್ಸವ, ಮಧ್ಯಾಹ್ನ ಅನ್ನಸಂತರ್ಪಣೆ
ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಬೆಳಿಗ್ಗೆ ೯ರಿಂದ ಭದ್ರಕಾಳಿ ಅಮ್ಮನವರ ಗುಡಿಯಲ್ಲಿ ವಿಶೇಷ ಪೂಜೆ, ಶಿರಾಡಿ, ಗುಳಿಗ ದೈವಗಳ ನೇಮ, ಮಧ್ಯಾಹ್ನ ೧೨ರಿಂದ ಗಂಜಿ ಊಟ ಸೇವೆ
ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆ ೭ರಿಂದ ಉತ್ಸವ, ಮಧ್ಯಾಹ್ನ ೧೨ಕ್ಕೆ ಮಹಾಪೂಜೆ, ಶ್ರೀ ದೇವರ ಬಲಿ, ಅನ್ನಸಂತರ್ಪಣೆ, ರಾತ್ರಿ ೮ರಿಂದ ಉತ್ಸವ ಬಲಿ, ಕಾವು-ನನ್ಯ ತುಡರ್ ಯುವಕ ಮಂಡಲದ ೧೪ನೇ ವಾರ್ಷಿಕೋತ್ಸವ-ತುಡರ್ ಹಬ್ಬ, ಸಂಜೆ ೭ರಿಂದ ನೃತ್ಯಾರ್ಪಣಾ, ರಾತ್ರಿ ೮.೩೦ರಿಂದ ಸಭಾ ಕಾರ್ಯಕ್ರಮ, ಸನ್ಮಾನ, ೯.೩೦ರಿಂದ ಕುಟ್ಯಣ್ಣನ ಕುಟುಂಬ ನಾಟಕ
ಕೆದಂಬಾಡಿ ಸನ್ಯಾಸಿಗುಡ್ಡೆ ಶ್ರೀ ರಾಮ ಮಂದಿರದಲ್ಲಿ ಸಂಜೆ `ಶ್ರೀ ಹರಿದರ್ಶನ’ ಯಕ್ಷಗಾನ ಬಯಲಾಟ
ಉಪ್ಪಿನಂಗಡಿ ೩೪ ನೆಕ್ಕಿಲಾಡಿ ಶ್ರೀ ಗುರುರಾಘವೇಂದ್ರ ಮಠದಲ್ಲಿ ಬೆಳಿಗ್ಗೆ ೬.೩೦ರಿಂದ ಪ್ರತಿಷ್ಠಾ ವಾರ್ಷಿಕೋತ್ಸವ
ಕಾಮಣ ಮರಕ್ಕಡ ಕಲ್ಲಮಾಡದಲ್ಲಿ ರಾತ್ರಿ ೭.೩೦ರಿಂದ ಮರಕ್ಕಡದಲ್ಲಿ ಚಾಮುಂಡಿ ದೈವದ ಭಂಡಾರ ತೆಗೆಯುವುದು, ಅನ್ನಸಂತರ್ಪಣೆ, ೯.೩೦ರಿಂದ ಶ್ರೀ ಚಾಮುಂಡಿ ದೈವದ ನೇಮೋತ್ಸವ
ಕೆಯ್ಯೂರು ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಬೆಳಿಗ್ಗೆ ಮಹಾಗಣಪತಿ ಹೋಮ, ಚಂಡಿಕಾಯಾಗ, ಉಗ್ರಾಣ ತುಂಬಿಸುವುದು, ಹಸಿರುವಾಣಿ ಹೊರೆ ಕಾಣಿಕೆ ಸಮರ್ಪಣೆ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ
ಪಾಲ್ತಾಡು ನಡುಮನೆ ವಿಷ್ಣುಮೂರ್ತಿ ದೈವದ ಒತ್ತೆಕೋಲ
ಆತೂರು ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನದಲ್ಲಿ ಬೆಳಿಗ್ಗೆ ೮.೩೦ಕ್ಕೆ ಜಾತ್ರೋತ್ಸವದ ಗೊನೆ ಮುಹೂರ್ತ
ವೀರಮಂಗಲ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವ
ಎರುಂಬು ಸಿಂಹಮೂಲೆ ಬೊಳ್ನಾಡು ಶ್ರೀ ಚೀರುಂಭ ಭಗವತಿ ಕ್ಷೇತ್ರದಲ್ಲಿ ಭರಣಿ ಮಹೋತ್ಸವ, ಮಧ್ಯಾಹ್ನ ೧೨ಕ್ಕೆ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ೬ರಿಂದ ಭಜನೆ, ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ ೯ರಿಂದ ಬಲಿ ಉತ್ಸವ, ಬಿಂಬದರ್ಶನ

LEAVE A REPLY

Please enter your comment!
Please enter your name here