ಸವಣೂರು ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜಾತ್ರೋತ್ಸವ, ಭಜನಾ ಸಂಭ್ರಮ

0

ಪುತ್ತೂರು: ಪ್ರಕೃತಿ ರಮಣೀಯ, ಸುಂದರವಾದ ಬೆಟ್ಟಗುಡ್ಡಗಳಿಂದಾವೃತವಾದ ಹಸಿರುಸಿರಿ ಮೆತ್ತಿಕೊಂಡಿರುವ ವನಗಳಿಂದ ಕಂಗೊಳಿಸುತ್ತಿರುವ ಪ್ರಶಾಂತ ಪರಿಸರವಾಗಿರುವ ಸವಣೂರು ಗ್ರಾಮದ ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಾಲಯದಲ್ಲಿ 11 ನೇ ವಾರ್ಷಿಕ ಪ್ರತಿಷ್ಠಾ ಮಹೋತ್ಸವ ಬ್ರಹ್ಮಶ್ರೀ ನೀಲೇಶ್ವರ ಆರೋತ್ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಮಾ. 25 ರಂದು ಆರಂಭಗೊಂಡಿತು.


ಮಾ. ೨೫ ರಂದು ಬೆಳಿಗ್ಗೆ ೬.೩೦ಕ್ಕೆ ಅರ್ಧ ಏಕಾಹ ಭಜನೆ ಪ್ರಾರಂಭಗೊಂಡಿತು, ದೇವಾಲಯದ ಅರ್ಚಕರಾದ ಪದ್ಮನಾಭ ಕುಂಜತ್ತಾಯ, ಪವಿತ್ರಪಾಣಿ ರತ್ನಾಕರ ಕುಂಜತ್ತಾಯರವರು ದೀಪ ಬೆಳಗಿಸಿ ಭಜನಾ ಕಾರ್‍ಯಕ್ರಮವನ್ನು ಉದ್ಘಾಟಸಿದರು. ಬೆಳಿಗ್ಗೆ ಊರ ಭಕ್ತಾಧಿಗಳಿಂದ ಹೊರೆಕಾಣಿಕೆ ಸಮರ್ಪಣೆ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ದೇವಾಲಯದ ಅರ್ಚಕ ಪದ್ಮನಾಭ ಕುಂಜತ್ತಾಯ, ಪವಿತ್ರಪಾಣಿ ರತ್ನಾಕರ ಕುಂಜತ್ತಾಯ, ಜಾತ್ರಾ ಮಹೋತ್ಸವ ಸಮಿತಿಯ ಅಧ್ಯಕ್ಷ ಕೆ.ಸೀತಾರಾಮ ರೈ ಸವಣೂರು, ಕಾರ್ಯದರ್ಶಿ ಶಿವಪ್ರಸಾದ್ ಶೆಟ್ಟಿ ಕಿನಾರ, ಸದಸ್ಯರುಗಳಾದ ನವೀನ್ ಕುಮಾರ್ ಶೆಟ್ಟಿ ಮುಗೇರುಗುತ್ತು, ಆಶಾ ಪ್ರವೀಣ್ ಕಂಪ, ಶಿವರಾಮ ಗೌಡ ಮೆದು, ಮೋನಪ್ಪ ಗೌಡ ಆರೇಲ್ತಡಿ, ರಾಕೇಶ್ ರೈ ಕೆಡೆಂಜಿ ಹಾಗೂ ಪ್ರೇಮ ಪುಟ್ಟಣ ನಾಯ್ಕ ಆರೇಲ್ತಡಿ, ಭಜನಾ ಕಾರ್‍ಯಕ್ರಮದ ಸಂಘಟಕ ರಾಜೇಶ್ ರೈ ಮುಗೇರು. ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ತಾರಾನಾಥ ಕಾಯರ್ಗ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ರಾಜಕೀಯ, ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಮುಖಂಡರುಗಳು, ಊರ-ಪರವೂರ ಭಕ್ತಾಧಿಗಳು ಭಾಗವಹಿಸಿದರು.


ಮಾ. 26 ರಂದು ದೇವಾಲಯದಲ್ಲಿ
ಮಾ. ೨೬ ರಂದು ಬೆಳಿಗ್ಗೆ ೬ ರಿಂದ ಮಹಾಗಣಪತಿ ಹೋಮ, ನಾಗ ತಂಬಿಲ, ಕಲಶಾಭಿಷೇಕ ಸಹಿತ ವೈದಿಕ ಕಾರ್‍ಯಕ್ರಮ, ಮಧ್ಯಾಹ್ನ ಅನ್ನಸಂತರ್ಪಣೆ, ರಾತ್ರಿ ೮ ರಿಂದ ಶ್ರೀ ದೇವರ ಬಲಿ ಹೊರಟು ಉತ್ಸವ, ಶ್ರೀ ಭೂತ ಬಲಿ, ವಸಂತ ಕಟ್ಟೆ ಪೂಜೆ, ಸುಡುಮದ್ದು ಪ್ರದರ್ಶನ, ದರ್ಶನ ಬಲಿ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ, ಅನ್ನಸಂತರ್ಪಣೆ ನಡೆಯಲಿದೆ ಎಂದು ದೇವಾಲಯದ ಜಾತ್ರೋತ್ಸವ ಸಮಿತಿ ಅಧ್ಯಕ್ಷ ಸವಣೂರು ಕೆ. ಸೀತಾರಾಮ ರೈ, ಕಾರ್‍ಯದರ್ಶಿ ಎನ್.ಶಿವಪ್ರಸಾದ್ ಶೆಟ್ಟಿ ಕಿನಾರ ಹಾಗೂ ಜಾತ್ರಾ ಮಹೋತ್ಸವ ಸಮಿತಿಯ ಸದಸ್ಯರುಗಳು ತಿಳಿಸಿದ್ದಾರೆ.


ತಂತ್ರಿಗಳ ವಸತಿಗೃಹ ಉದ್ಘಾಟನೆ
ದೇವಾಲಯದ ಸಮೀಪ ತಂತ್ರಿಗಳ ವಸತಿಗೃಹವನ್ನು ಸುಮಾರು ೩ ಲಕ್ಷ ರೂ, ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿದ್ದು. ಇದರ ಶುಭಾರಂಭವು ವಿವಿಧ ವೈದಿಕ ಕಾರ್‍ಯಕ್ರಮಗಳೊಂದಿಗೆ ಮಾ. ೨೫ ರಂದು ನಡೆಯಿತು.

LEAVE A REPLY

Please enter your comment!
Please enter your name here