ಪುತ್ತೂರು: ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ನಡೆಯುತ್ತಿದ್ದು, ಕರ್ನಾಟಕ ರಾಜ್ಯ ಹಿಂದೂ ಧಾರ್ಮಿಕ ಪರಿಷತ್ ನ ಸದಸ್ಯೆ ಮಲ್ಲಿಕಾ ಪಕ್ಕಳರವರು ಮಾ.25ರಂದು ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ಗಂಧ ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮೊಕ್ತೇಸರರಾದ ದಿವ್ಯನಾಥ ಶೆಟ್ಟಿ ಕಾವು, ನೆಟ್ಟಣಿಗೆ ಮುಡ್ನೂರು ಜಿಲ್ಲಾ ಪಂಚಾಯತ್ ನ ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ಅರಿಯಡ್ಕ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಶಶಿಕಲಾ ಚೌಟ, ವ್ಯವಸ್ಥಾಪನ ಸಮಿತಿಯ ಸದಸ್ಯರಾದ ರವೀಂದ್ರ ಪೂಜಾರಿ ಮಂಜಕೊಟ್ಯ, ರವಿರಾಜ್ ಬೊರ್ಕರ್ ನನ್ಯ, ನವೀನ ಕುಮಾರಿ ಬಿ.ಡಿ , ಅಮ್ಮು ರೈ ಅಂಕೊತ್ತಿಮಾರ್, ಸುಮಲತಾ, ಅಂಬೋಡಿ, ಚಂದ್ರಶೇಖರ ಬಲ್ಯಾಯ ಮಧ್ಲ, ದೇವಸ್ಥಾನದ ಅರ್ಚಕರಾದ ಶಿವಪ್ರಸಾದ್ ಕಡಮಣ್ಣಾಯ, ಸುರೇಖ ದಿವ್ಯಾನಾಥ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.