ವಿಟ್ಲ: ಅಪ್ರಾಪ್ತ ಬಾಲಕಿಯೋರ್ವಳ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಬಂಟ್ವಾಳ ತಾಲೂಕು ಮಾಣಿಲ ಗ್ರಾಮದ ವ್ಯಕ್ತಿಯೋರ್ವರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಮಾಣಿಲ ಗ್ರಾಮದ ವ್ಯಕ್ತಿಯೋರ್ವರ ಮನೆಗೆ ಕೆಲಸಕ್ಕೆಂದು ಬಾಲಕಿಯ ತಂದೆ ತೆರಳಿದ್ದ ವೇಳೆ ಅವರೊಂದಿಗೆ ಬಾಲಕಿಯೂ ತೆರಳಿದ್ದಳೆನ್ನಲಾಗಿದೆ. ಈ ವೇಳೆ ಆ ವ್ಯಕ್ತಿ ಅಸಭ್ಯವಾಗಿ ವರ್ತಿಸಿದ್ದರೆಂದು ಆರೋಪಿಸಿ ನೊಂದ ಬಾಲಕಿಯು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ ಎಂದು ಮಾಹಿತಿ ಲಭಿಸಿದೆ.