ಮಾ.27-28: ಕೋಡಿಂಬಾಡಿ, ಬೆಳ್ಳಿಪ್ಪಾಡಿ, ಕಂಬಳದಡ್ಡ ಶ್ರೀಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

0

ಪುತ್ತೂರು: ಕೋಡಿಂಬಾಡಿ, ಬೆಳ್ಳಿಪ್ಪಾಡಿ, ಕಂಬಳದಡ್ಡ ಶ್ರೀಚಾಮುಂಡೇಶ್ವರಿ ಕ್ಷೇತ್ರ ಹಾಗು ಗುಳಿಗ ಚಾಮುಂಡಿ ಮತ್ತು ಪರಿವಾರ ದೈವಗಳ ಕ್ಷೇತ್ರದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮಾ.27 ಮತ್ತು 28ರಂದು ವೇದಮೂರ್ತಿ ಶ್ರೀಪತಿ ಭಟ್ ಮಾಡಾವು ಇವರ ನಿರ್ದೇಶನದಂತೆ ವೈದಿಕ ತಂತ್ರಿಗಳ ಪೌರೋಹಿತ್ಯದಲ್ಲಿ ನಡೆಯಲಿದೆ.


ಮಾ.27ರಂದು ಸಂಜೆ ವಾಸ್ತು ಬಲಿ, ವಾಸ್ತು ರಕ್ಷೋಘ್ನ ಹೋಮ, ರಾತ್ರಿ ಶ್ರೀದುಗಾ ಕಲಾ ತಂಡ ಮೈರ, ಕೇಪು ಪ್ರಗತಿ ಕಲಾವಿದರು ವಿಟ್ಲ ಅಭಿನಯದ ಸಾಮಾಜಿಕ ನಾಟಕ ಕಾಂಚನ ನಡೆಯಲಿದೆ.

ಮಾ.28ರಂದು ಬೆಳಿಗ್ಗೆ ಗಣಪತಿ ಹೋಮ, ಪ್ರತಿಷ್ಠಾಂಗ ಹೋಮ, ಬ್ರಹ್ಮಕಲಶ ಪೂಜೆ, ಪ್ರತಿಷ್ಠೆ ಕಲಶಾಭಿಷೇಕ, ತಂಬಿಲ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ಶ್ರೀದೈವಗಳ ಭಂಡಾರ ತೆಗೆದು ನೇಮೋತ್ಸವ ನಡೆಯಲಿದೆ ಸಮಿತಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here