ಪುತ್ತೂರು: ಮಂಗಳೂರು ತಾಲೂಕಿನ ನೀರುಮಾರ್ಗದ ನೀರುಮಾರ್ಗ ಸೇವಾ ಸಹಕಾರಿ ಸಂಘದ ಅಮೃತಸೌಧದಲ್ಲಿ ವಿಜಯ ಕರ್ನಾಟಕ ಪತ್ರಿಕೆ ವತಿಯಿಂದ ಮಂಗಳವಾರ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ವಿಕ ಸೂಪರ್ ಸ್ಟಾರ್ ರೈತ’ 2024-25ನೇ ಸಾಲಿನ ಪುರಸ್ಕಾರ ಪ್ರದಾನ ಕಾರ್ಯಕ್ರಮದಲ್ಲಿ ಪುತ್ತೂರು ತಾಲೂಕಿನ ವಿಜಯಕುಮಾರ್ ಸೊರಕೆರವರನ್ನು ದ.ಕ ಜಿಲ್ಲಾ ಮಟ್ಟದ ವಿಕ ಸೂಪರ್ ಸ್ಟಾರ್ ರೈತ ಪುರಸ್ಕೃತರನ್ನಾಗಿ ಆಯ್ಕೆ ಮಾಡಿ ಸನ್ಮಾನಿಸಿದೆ.
ಈ ಕಾರ್ಯಕ್ರಮದಲ್ಲಿ ಕಾಸರಗೋಡು, ಮಂಗಳೂರು, ಸುಳ್ಯ, ಬಂಟ್ವಾಳ ಹಾಗೂ ಪುತ್ತೂರು ತಾಲೂಕಿನಂದ ಓರ್ವರನ್ನು ದ.ಕ ಜಿಲ್ಲಾ ಮಟ್ಟದ ವಿಕ ಸೂಪರ್ ಸ್ಟಾರ್ ರೈತ ಪುರಸ್ಕೃತರನ್ನು ಆಯ್ಕೆ ಮಾಡಲಾಗಿತ್ತು. ಈ ನಿಟ್ಟಿನಲ್ಲಿ ಪುತ್ತೂರು ತಾಲೂಕಿನಿಂದ ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಸಿಂಡಿಕೇಟ್ ಸದಸ್ಯ, ಪುತ್ತೂರು ಬಿಲ್ಲವ ಸಂಘದ ಮಾಜಿ ಅಧ್ಯಕ್ಷ, ಜಿಲ್ಲಾ ಮೂರ್ತೆದಾರರ ಮಹಾಮಂಡಲದ ಮಾಜಿ ಅಧ್ಯಕ್ಷ, ನರಿಮೊಗರು ಮೂರ್ತೆದಾರರ ಸೊಸೈಟೆಯ ಮಾಜಿ ಅಧ್ಯಕ್ಷ, ಕುದ್ರೋಳಿ ಗೋಕರ್ಣನಾಥೇಶ್ವರ ಬ್ಯಾಂಕಿನ ಮಾಜಿ ನಿರ್ದೇಶಕರಾಗಿ ವಿಜಯಕುಮಾರ್ ಸೊರಕೆರವರನ್ನು ಆಯ್ಕೆಗೊಳಿಸಿ ಸನ್ಮಾನಿಸಿರುತ್ತಾರೆ.
ಪ್ರಶಸ್ತಿ ವಿತರಣಾ ಈ ಕಾರ್ಯಕ್ರಮದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಶಾಸಕ ಡಾ.ವೈ ಭರತ್ ಶೆಟ್ಟಿ, ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಪೊನ್ನಪ್ಪ ಗೌಡ, ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕ ಮಂಜುನಾಥ್ ಸಹಿತ ಹಲವರು ಗಣ್ಯ ಅತಿಥಿಗಳು ಉಪಸ್ಥಿತರಿದ್ದರು.