ಮಾ.28: ಕಾಂಚನ ಹಾ.ಉ.ಸ.ಸಂಘದ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಗೌಡರಿಗೆ ಅಭಿನಂದನಾ ಕಾರ್ಯಕ್ರಮ

0

ನೆಲ್ಯಾಡಿ: ಕಳೆದ 35 ವರ್ಷಗಳಿಂದ ಕಾಂಚನ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದು ಮಾ.31ರಂದು ನಿವೃತ್ತಿಯಾಗಲಿರುವ ಚಂದ್ರಶೇಖರ ಗೌಡರಿಗೆ ಅಭಿನಂದನಾ ಕಾರ್ಯಕ್ರಮ ಮಾ.28ರಂದು ಬೆಳಿಗ್ಗೆ 10.30ಕ್ಕೆ ಸಂಘದ ವಠಾರದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಪಿ.ಡೆನ್ನಿಸ್ ಪಿಂಟೊ ಅವರು ತಿಳಿಸಿದ್ದಾರೆ.


ಬೆಳಿಗ್ಗೆ 7.30ಕ್ಕೆ ಸಂಘದಲ್ಲಿ ಗಣಹೋಮ ನಡೆಯಲಿದೆ. 10.30ರಿಂದ ಅಭಿನಂದನಾ ಕಾರ್ಯಕ್ರಮ ನಡೆಯಲಿದ್ದು ಸಂಘದ ಸ್ಥಾಪಕಾಧ್ಯಕ್ಷ ಯಶವಂತ ಜಿ. ಕೆಮ್ಮಾರ ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಉಪವ್ಯವಸ್ಥಾಪಕ ಡಾ.ಸತೀಶ್ ರಾವ್, ವ್ಯವಸ್ಥಾಪಕರಾದ ಡಾ.ಜಿತೇಂದ್ರ ಪ್ರಸಾದ್, ವಿಸ್ತರಣಾಧಿಕಾರಿ ರಾಜೇಶ್ ಕಾಮತ್, ಬಜತ್ತೂರು ಗ್ರಾ.ಪಂ.ಅಧ್ಯಕ್ಷ ಗಂಗಾಧರ ಗೌಡ ಪಿ.ಎನ್.ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here