ಪುತ್ತೂರು: ಸವಣೂರು ಗ್ರಾಮದ ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ನೀಲೇಶ್ವರ ಆರೋತ್ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಅದ್ದೂರಿಯಾಗಿ, ಅತ್ಯಂತ ವೈಭವಪೂರ್ಣವಾಗಿ ಜಾತ್ರೋತ್ಸವ ನಡೆಯಿತು.

ಮಾ. ೨೬ ರಂದು ರಾತ್ರಿ ಶ್ರೀ ದೇವರ ಬಲಿ ಹೊರಟು ಉತ್ಸವ, ಶ್ರೀ ಭೂತಬಲಿ, ವಸಂತಕಟ್ಟೆ ಪೂಜೆ, ಸುಡುಮದ್ದು ಪ್ರದರ್ಶನ, ದರ್ಶನಬಲಿ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ, ಅನ್ನಸಂತರ್ಪಣೆ ನಡೆಯಿತು. ಸತೀಶ್ ಶೆಟ್ಟಿ ಕಿನಾರ ಮತ್ತು ಶಿವಪ್ರಸಾದ್ ಶೆಟ್ಟಿ ಕಿನಾರರವರು ಶ್ರೀ ದೇವರ ಉತ್ಸವ ಮೂರ್ತಿಗೆ(ದರ್ಶನಬಲಿ) ಬೆಳ್ಳಿಕವಚವನ್ನು ಸಮರ್ಪಣೆ ಮಾಡಿದರು.
ದೇವಾಲಯದ ಪವಿತ್ರಪಾಣಿ ರತ್ನಾಕರ ಕುಂಜತ್ತಾಯ, ಅರ್ಚಕ ಪದ್ಮನಾಭ ಕುಂಜತ್ತಾಯ, ಜಾತ್ರೋತ್ಸವ ಸಮಿತಿಯ ಅಧ್ಯಕ್ಷ ಸವಣೂರು ಕೆ.ಸೀತಾರಾಮ ರೈ, ಕಾರ್ಯದರ್ಶಿ ಶಿವಪ್ರಸಾದ್ ಶೆಟ್ಟಿ ಕಿನಾರ, ಸದಸ್ಯರುಗಳಾದ ನವೀನ್ ಕುಮಾರ್ ಶೆಟ್ಟಿ ಮುಗೇರುಗುತ್ತು, ಆಶಾ ಪ್ರವೀಣ್ ಕಂಪ, ಶಿವರಾಮ ಗೌಡ ಮೆದು, ಮೋನಪ್ಪ ಗೌಡ ಆರೇಲ್ತಡಿ, ರಾಕೇಶ್ ರೈ ಕೆಡೆಂಜಿ, ಪ್ರೇi ಪುಟ್ಟಣ ನಾಯ್ಕ ಆರೇಲ್ತಡಿ ಹಾಗೂ ಊರ ಹಾಗೂ ಪರವೂರ ಭಕ್ತಾಧಿಗಳು ಭಾಗವಹಿಸಿದರು


ಎಲ್ಲರ ಸಹಕಾರ, ಪ್ರೋತ್ಸಾಹದಿಂದ ಜಾತ್ರೋತ್ಸವ ಯಶಸ್ವಿ. ದೇವಾಲಯದ ತಂತ್ರಿಯವರಾದ ಪದ್ಮನಾಭ ತಂತ್ರಿ, ಪವಿತ್ರಪಾಣಿ ರತ್ನಾಕರ ಕುಂಜತ್ತಾಯ, ಅರ್ಚಕ ಪದ್ಮನಾಭ ಕುಂಜತ್ತಾಯ, ಅನುವಂಶೀಯ ಮೊಕ್ತೇಸರ ನವೀನ್ಕುಮಾರ್ ಶೆಟ್ಟಿ ಮುಗೇರುಗುತ್ತು, ಜಾತ್ರೋತ್ಸವ ಸಮಿತಿಯ ಅಧ್ಯಕ್ಷ ಸವಣೂರು ಕೆ.ಸೀತಾರಾಮ ರೈ ಮತ್ತು ಸದಸ್ಯರುಗಳ ಸಹಕಾರ, ಊರ ಭಕ್ತಾಭಿಮಾನಿಗಳಿಂದ ಶ್ರಮದಾನದಲ್ಲಿ ಭಾಗವಹಿಸುವಿಕೆ, ತನು-ಮನ-ಧನಗಳಿಂದ ಸಹಕಾರ, ಊರ-ಪರವೂರ ಭಕ್ತರ ಪ್ರೋತ್ಸಾಹದಿಂದ ಎರಡು ದಿನಗಳ ಜಾತ್ರೋತ್ಸವ ಅತ್ಯಂತ ಯಶಸ್ವಿಯಾಗಿದೆ ಎಲ್ಲರಿಗೂ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ.ಮುಂಬರುವ ದಿನಗಳಲ್ಲಿ ದೇವಾಲಯದ ಬ್ರಹ್ಮಕಲಶೋತ್ಸವ ನಡೆಯಲಿದೆ. ದೇವಾಲಯದಲ್ಲಿ ಮುಂದೆ ಅನ್ನಛತ್ರ, ಸಭಾಭವನ ನಿರ್ಮಾಣವಾಗಲಿದ್ದು, ಎಲ್ಲರ ಸಹಕಾರ ಅಗತ್ಯ.
ಶಿವಪ್ರಸಾದ್ ಶೆಟ್ಟಿ ಕಿನಾರ, ಜಾತ್ರೋತ್ಸವ ಸಮಿತಿ ಕಾರ್ಯದರ್ಶಿ