ಎಸ್. ಎಸ್. ಎಲ್‌. ಸಿ 100% ಫಲಿತಾಂಶದ ಗೀಳು : ಪದ್ಮುಂಜ ಸರಕಾರಿ ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರಿಗೆ ಪರೀಕ್ಷೆ ನಿರಾಕರಣೆಯ ಆರೋಪ

0

ಉಪ್ಪಿನಂಗಡಿ:ಕಲಿಕೆಯಲ್ಲಿ ಹಿಂದಿದ್ದಾರೆಂಬ ಕಾರಣಕ್ಕೆ ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರಿಗೆ ಎಸ್.ಎಸ್.ಎಲ್‌.ಸಿ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಿದ ಘಟನೆ ವರದಿಯಾಗಿದೆ.


ಖಾಸಗಿ ಶಾಲೆಗಳು 100% ಫಲಿತಾಂಶಕ್ಕಾಗಿ ಕಲಿಕೆಯಲ್ಲಿ ಹಿಂದಿರುವ ಮಕ್ಕಳನ್ನು ಒಂಬತ್ತನೇ ತರಗತಿಯಿಂದಲೇ ಬೇರೆ ಶಾಲೆಗೆ ವರ್ಗಾಯಿಸುತ್ತಿರುವ ಬಗ್ಗೆ ದೂರುಗಳು ಎಲ್ಲೆಡೆ ಕೇಳಿ ಬರುತ್ತಿರುವ ಈ ಕಾಲಘಟ್ಟದಲ್ಲಿ ಸರಕಾರಿ ಶಾಲೆ ಕೂಡಾ ಕಲಿಕೆಯಲ್ಲಿ ಹಿಂದುಳಿದಿರುವ ಕಾರಣಕ್ಕೆ ಇಬ್ಬರು ವಿದ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಿ ಅನ್ಯಾಯವೆಸಗಲಾಗಿದೆ ಎಂದು ರಾಜ್ಯ ಮಕ್ಕಳ ಹಕ್ಕು ರಕ್ಷಣಾ ಆಯೋಗಕ್ಕೆ ದೂರು ಸಲ್ಲಿಸಲಾಗಿದೆ.

ಕಾರಣ ಕೇಳಿ ನೋಟಿಸ್-‌ ಬಿಇಒ :
ಈ ಬಗ್ಗೆ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಪ್ರತಿಕ್ರಿಯಿಸಿ ಪ್ರಕರಣದ ಬಗ್ಗೆ ಕಾರಣ ಕೇಳಿ ನೋಟೀಸು ನೀಡಲಾಗಿದೆ. ಖುದ್ದು ಶಾಲೆಗೆ ಭೇಟಿ ನೀಡಿ ಪರಿಶೀಲನೆ ಮಾಡಲಾಗುವುದೆಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here