ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ). ಧರ್ಮಸ್ಥಳದ ಸಮುದಾಯ ಅಭಿವೃದ್ಧಿ ವಿಭಾಗದಿಂದ ಮಿತ್ತೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣ ರಚನೆಗೆ ರೂ ಒಂದು ಲಕ್ಷದ ಸಹಾಯಧನ ಮಂಜೂರಾತಿ ಪತ್ರವನ್ನು ಶಾಲಾ ಮುಖ್ಯೋಪಾಧ್ಯಾಯಿನಿ ಸರೋಜ ರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯ ವಿಟ್ಲ ತಾಲೂಕಿನ ಯೋಜನಾಧಿಕಾರಿ ರಮೇಶ್ ರವರು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಮಾಣಿ ವಲಯ ಮೇಲ್ವಿಚಾರಕಿ ಆಶಾ ಪಾರ್ವತಿ, ಸೇವಾ ಪ್ರತಿನಿಧಿ ಸುಗಂಧಿನಿ, ಶೌರ್ಯ ಸದಸ್ಯರಾದ ಪದ್ಮನಾಭ, ವೆಂಕಟರಮಣ, ಪೃಥ್ವಿರಾಜ್, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಸುಧೀರ್ ಕುಮಾರ್ ಶೆಟ್ಟಿ, ಎಸ್ ಡಿ ಎಂ ಸಿ ಸದಸ್ಯರು ಮತ್ತು ಸಹ ಶಿಕ್ಷಕರು ಉಪಸ್ಥಿತರಿದ್ದರು.