ಪುತ್ತೂರು: ಪುತ್ತೂರಿನ ಹಿರಿಯ ಕ್ಲಬ್ ಎನಿಸಿದ ರೋಟರಿ ಕ್ಲಬ್ ಪುತ್ತೂರಿಗೆ ಮಾ.28 ರಂದು ರೋಟರಿ ಜಿಲ್ಲಾ ಗವರ್ನರ್ ವಿಕ್ರಂ ದತ್ತ ಅಧಿಕೃತ ಭೇಟಿ ಸಂದರ್ಭ ಜಿಲ್ಲಾ ಗವರ್ನರ್ ವಿಕ್ರಂ ದತ್ತರವರು ಪುತ್ತೂರು ರಾಧಾಕೃಷ್ಣ ಬಿಲ್ಡಿಂಗ್ ನಲ್ಲಿನ ರೋಟರಿ ಕ್ಲಬ್ ಪುತ್ತೂರು ಕಣ್ಣಿನ ಆಸ್ಪತ್ರೆ ಮತ್ತು ಪ್ರಸಾದ್ ನೇತ್ರಾಲಯ ಇದರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಉಚಿತ ನೇತ್ರ ತಪಾಸಣಾ ಶಿಬಿರಕ್ಕೆ ಭೇಟಿ ನೀಡಿದರು.
ಶಿಬಿರವು ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ನಡೆಯಿತು.
ಪುತ್ತೂರಿನ ಹಿರಿಯ ಕ್ಲಬ್ ಎನಿಸಿದ ಪುತ್ತೂರು ರೋಟರಿ ಕ್ಲಬ್ ಈಗಾಗಲೇ ಈ ಕಣ್ಣಿನ ಆಸ್ಪತ್ರೆಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದ್ದು ಈ ಶಿಬಿರದಲ್ಲಿ ಕಣ್ಣಿನ ಸಂಪೂರ್ಣ ತಪಾಸಣೆ ನಡೆಸಲಾಗುವುದು, ಬಿಪಿಎಲ್ ಕಾರ್ಡುದಾರರಿಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಉಚಿತವಾಗಿ ಮಾಡಲಾಗುವುದು. ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯನ್ನು ನಿಗದಿಪಡಿಸಿದ ದಿನಾಂಕಗಳಲ್ಲಿ ಮಾಡಲಾಗುವುದು ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಗವರ್ನರ್ ವಿಕ್ರಂ ದತ್ತರವರು ರೋಟರಿ ಪುತ್ತೂರು ಇದರ ಸಾಮಾಜಿಕ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ರೋಟರಿ ಕ್ಲಬ್ ಪುತ್ತೂರು ಅಧ್ಯಕ್ಷ ಡಾ.ಶ್ರೀಪತಿ ರಾವ್, ಕಾರ್ಯದರ್ಶಿ ದಾಮೋದರ್ ಕೆ.ಎ, ಸದಸ್ಯರಾದ ಶ್ರೀಧರ್ ಗೌಡ ಕಣಜಾಲು, ಎ.ಜೆ ರೈ, ಝೇವಿಯರ್ ಡಿ’ಸೋಜ, ದತ್ತಾತ್ರೇಯ ರಾವ್ ಹೆರಾಲ್ಡ್ ಮಾಡ್ತಾ, ಡಾ.ಅವಿಲ್ ಗೊನ್ಸಾಲ್ವಿಸ್, ರೋಟರಿ ಕ್ಲಬ್ ಪುತ್ತೂರು ಕಣ್ಣಿನ ಆಸ್ಪತ್ರೆ ವೈದ್ಯೆ ಡಾ.ಮಾನಸ, ರೋಟರಿ ಪುತ್ತೂರು ಚಾರಿಟೇಬಲ್ ಟ್ರಸ್ಟ್ ಪಿ.ಆರ್.ಒ ಅವಿನ್ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
30 ಫಲಾನುಭವಿಗಳು..
ಶಿಬಿರದಲ್ಲಿ 30 ಮಂದಿ ಫಲಾನುಭವಿಗಳು ಭಾಗವಹಿಸಿ ತಜ್ಞ ವೈದ್ಯರಿಂದ ಸೂಕ್ತ ಸಲಹೆಯನ್ನು ಪಡೆದಿರುತ್ತಾರೆ.