ಮಂಗಳೂರು: ರಾಮಕೃಷ್ಣ ಮಿಷನ್ ಬಾಲಕಾಶ್ರಮ ಆರ್ಥಿಕವಾಗಿ ಹಿಂದುಳಿದ ಗ್ರಾಮೀಣ ಪ್ರದೇಶದ ಪ್ರತಿಭಾವಂತ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಶಿಕ್ಷಣ, ಊಟ, ವಸತಿಗಳನ್ನು ಉಚಿತವಾಗಿ ಒದಗಿಸಲಾಗುವುದು. 7ನೇ ತರಗತಿಯಲ್ಲಿ ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾದ ಹುಡುಗರು ಅರ್ಜಿ ಸಲ್ಲಿಸಬಹುದು. 8ನೇ ತರಗತಿಗೆ ಮಾತ್ರ ಪ್ರವೇಶವಿದ್ದು, ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು. ಏ.25 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ. ಅರ್ಜಿ ಪಡೆಯಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರಾಮಕೃಷ್ಣ ಮಿಷನ್ ಬಾಲಕಾಶ್ರಮ ಮಂಗಳಾದೇವಿ, ಮಂಗಳೂರು-575 001(email: rkmbalakashrama@gmail.com) ಫೋನ್: 0824-241 4216 ಸಂಪರ್ಕಿಸಬಹುದು.