ರಾಮಕುಂಜ: ಕೊಯಿಲ ಗ್ರಾಮದ ಆತೂರು ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನದ ವಾರ್ಷಿಕ ಜಾತ್ರೆ ಪ್ರಯುಕ್ತ ಮಾ.29ರಂದು ಬೆಳಿಗ್ಗೆ ಗ್ರಾಮದ ಭಕ್ತರಿಂದ ಹೊರೆಕಾಣಿಕೆ ಸಮರ್ಪಣೆ ನಡೆಯಿತು.
ಬೆಳಿಗ್ಗೆ ಗ್ರಾಮದ ವಿವಿಧ ಕಡೆಗಳಿಂದ ಆಗಮಿಸಿದ ಹೊರೆಕಾಣಿಕೆಯನ್ನು ದೇವಸ್ಥಾನದ ಮೈದಾನದಲ್ಲಿ ಒಟ್ಟುಗೂಡಿಸಿ ಅಲ್ಲಿಂದ ಬ್ಯಾಂಡ್, ವಾದ್ಯಗಳೊಂದಿಗೆ ಮೆರವಣಿಗೆ ಮೂಲಕ ದೇವಸ್ಥಾನಕ್ಕೆ ತರಲಾಯಿತು. ಭಕ್ತರು ಅಕ್ಕಿ, ಅಡಿಕೆ, ತೆಂಗು, ಬಾಳೆಗೊನೆ, ಸಿಯಾಳ, ಹಿಂಗಾರ, ತರಕಾರಿ ಸೇರಿದಂತೆ ತಾವು ಬೆಳೆದ ವಿವಿಧ ಫಲವಸ್ತುಗಳನ್ನು ತಂದು ದೇವರಿಗೆ ಸಮರ್ಪಣೆ ಮಾಡಿದರು. ದೇವಸ್ಥಾನದ ಪವಿತ್ರಪಾಣಿ ವೆಂಕಟ್ರಮಣ ಕುದ್ರೆತ್ತಾಯ ಅವರು ಪೂಜಾ ವಿಧಿವಿಧಾನ ನೆರವೇರಿಸಿದರು. ಅರ್ಚಕ ವಿಷ್ಣುಮೂರ್ತಿ ಬಡೆಕ್ಕಿಲ್ಲಾಯ ಸಹಕರಿಸಿದರು.
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ನೀರಜ್ ಕುಮಾರ್ ರೈ ಅರುವಾರ ಬಾಳಿಕೆ, ಸದಸ್ಯರಾದ ಯತೀಶ್ ಗುಂಡಿಜೆ, ಸುನೀತ್‌ರಾಜ್ ಶೆಟ್ಟಿ ಬಂತೆಜಾಲು, ಶ್ರೀಧರ ಪೂಜಾರಿ ತುಂಬೆತ್ತಡ್ಕ, ಸಂಜೀವ ಸುದೆಂಗಳ, ಗೋಪಾಲ ನಾಯ್ಕ್ ಸಿಗೆತ್ತಡಿ, ಸುಜಾತ ಜೆ.ಶೆಟ್ಟಿ ಬಡಿಲ, ಮೀನಾಕ್ಷಿ ಕೆ.ಮುಂಡೈಮಾರು, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಯದುಶ್ರೀ ಆನೆಗುಂಡಿ, ಮಾಜಿ ಸದಸ್ಯರು, ಉತ್ಸವ ಸಮಿತಿ ಅಧ್ಯಕ್ಷ ಧರ್ಣಪ್ಪ ಗೌಡ ಕೊರಿಕ್ಕಾರು, ಉಪಾಧ್ಯಕ್ಷರಾದ ಪಾಂಡೇಲುಗುತ್ತು ಚಂದ್ರಹಾಸ ರೈ ಬುಡಲೂರು, ಶೀನಪ್ಪ ಗೌಡ ಪಲ್ಲಡ್ಕ, ರಾಜೀವ ಗೌಡ ಪೊಸಲಕ್ಕೆ, ಮೋಹನದಾಸ್ ಶೆಟ್ಟಿ ಬಡಿಲ, ಮುರಳಿಕೃಷ್ಣ ಬಡಿಲ, ಪ್ರಧಾನ ಕಾರ್ಯದರ್ಶಿ ವಿನೋದ್‌ಕುಮಾರ್ ಪಲ್ಲಡ್ಕ, ಕಾರ್ಯದರ್ಶಿಗಳಾದ ಶಾಂತರಾಮ ಗೌಡ ಬೇಂಗದಪಡ್ಪು, ದಾಮೋದರ ಪುಣ್ಕೆತ್ತಡಿ, ಜ್ಯೋತಿ ಕಲ್ಕಾಡಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಶೀನಪ್ಪ ಗೌಡ ವಳಕಡಮ, ಉಪಾಧ್ಯಕ್ಷರಾದ ಜಗನ್ನಾಥ ಶೆಟ್ಟಿ ಕಾರೆಗುಡ್ಡೆ, ಭವಾನಿಶಂಕರ್ ಪರಂಗಾಜೆ, ರಾಮ ನಾಯ್ಕ್ ಏಣಿತ್ತಡ್ಕ, ಬಾಲಕೃಷ್ಣ ಗೌಡ ಬೇಂಗದಪಡ್ಪು, ಕಾರ್ಯದರ್ಶಿ ಶಶಿಕುಮಾರ್ ಅಂಬಾ ಸಹಿತ ಕಾರ್ಯಕಾರಿ ಸಮಿತಿ ಸದಸ್ಯರು, ಎಲ್ಲಾ ಉಪಸಮಿತಿಗಳ ಸದಸ್ಯರು, ಗ್ರಾಮಸ್ಥರು ಹೊರೆಕಾಣಿಕೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.