ನೆಲ್ಯಾಡಿ: ಜೀರ್ಣೋದ್ದಾರಗೊಂಡು ಬ್ರಹ್ಮಕಲಶೋತ್ಸವ ನಡೆದಿರುವ ಕೊಣಾಲು ಗ್ರಾಮದ ತಿರ್ಲೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ದೃಢಕಲಶ, ರಂಗಪೂಜೆ ಹಾಗೂ ಯಕ್ಷಗಾನ ಬಯಲಾಟ ಮಾ.30ರಂದು ನಡೆಯಲಿದೆ.
ಬೆಳಿಗ್ಗೆ 8 ಗಂಟೆಗೆ ದೇವಸ್ಥಾನದಲ್ಲಿ ಗಣಹೋಮ ನಡೆಯಲಿದೆ. ಮಧ್ಯಾಹ್ನ 11 ಗಂಟೆಗೆ ದೃಢಕಲಶ ನಡೆಯಲಿದೆ. ರಾತ್ರಿ 8 ಗಂಟೆಗೆ ರಂಗಪೂಜೆ ನಡೆಯಲಿದೆ. ಸಂಜೆ 6.30ರಿಂದ ರಾತ್ರಿ 1 ಗಂಟೆ ತನಕ ಶ್ರೀ ಆದಿ ಧೂಮಾವತಿ ಶ್ರೀ ದೇಯಿಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಮೂಲಸ್ಥಾನ ಗೆಜ್ಜೆಗಿರಿ ಇವರಿಂದ ’ ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ’ ತುಳು ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.