ಪುತ್ತೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರು ಹುಟ್ಟಿದ ದಿನ ಏ.14 ರಂದು ಭಾರತದಾದ್ಯಂತ ಕೇಂದ್ರದ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ. ಅಂಬೇಡ್ಕರರ ಜಯಂತಿ ದಿನದಂದು ಇನ್ಮುಂದೆ ರಾಷ್ಟ್ರೀಯ ರಜೆ ಇರಲಿದೆ.
ಕೇಂದ್ರ ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಈ ಘೋಷಣೆ ಮಾಡಿದ್ದಾರೆ. ಭಾರತದಾದ್ಯಂತ ಕೈಗಾರಿಕಾ ಸಂಸ್ಥೆಗಳು ಸೇರಿದಂತೆ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಏಪ್ರಿಲ್ 14 ರ ಸೋಮವಾರದಂದು ರಜೆ ಇರಲಿದೆ. ಈ ನಿರ್ಧಾರದ ಬಗ್ಗೆ ಸಂಬಂಧಪಟ್ಟ ಎಲ್ಲರಿಗೂ ತಿಳಿಸಲು ಭಾರತ ಸರ್ಕಾರದ ಎಲ್ಲಾ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ಸೂಚಿಸಲಾಗಿದೆ.
ಬಾಬಾಸಾಹೇಬ್ ಅಂಬೇಡ್ಕರ್ ಎಂದೇ ಜನಪ್ರಿಯರಾಗಿರುವ ಡಾ. ಭೀಮರಾವ್ ರಾಮ್‌ಜಿ ಅಂಬೇಡ್ಕರ್ ಅವರು 1891 ರ ಏಪ್ರಿಲ್ 14 ರಂದು ಮಧ್ಯಪ್ರದೇಶದ ಮಾವ್‌ನಲ್ಲಿ ಜನಿಸಿದರು. ಸಾಮಾಜಿಕ ತಾರತಮ್ಯದ ವಿರುದ್ಧದ ಹೋರಾಟದಲ್ಲಿ ಪ್ರವರ್ತಕ ನಾಯಕರಾಗಿ ಗುರುತಿಸಿಕೊಂಡ ಅಂಬೇಡ್ಕರ್, ತಮ್ಮ ಇಡೀ ಜೀವನವನ್ನು ತುಳಿತಕ್ಕೊಳಗಾದ ಸಮುದಾಯಗಳ, ವಿಶೇಷವಾಗಿ ದಲಿತರ ಹಕ್ಕುಗಳಿಗಾಗಿ ಮುಡಿಪಾಗಿಟ್ಟರು.