ಆತೂರು ಶ್ರೀ ಸದಾಶಿವ ದೇವಸ್ಥಾನದ ಜಾತ್ರಾ ಮಹೋತ್ಸವ-ದರ್ಶನ ಬಲಿ

0

ರಾಮಕುಂಜ: ಮಾ.29ರಂದು ಧ್ವಜಾರೋಹಣದೊಂದಿಗೆ ಆರಂಭಗೊಂಡಿರುವ ಕೊಯಿಲ ಗ್ರಾಮದ ಆತೂರು ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನದ ಜಾತ್ರಾ ಮಹೋತ್ಸವದ 3ನೇ ದಿನವಾದ ಮಾ.31ರಂದು ಮಧ್ಯಾಹ್ನ ದೇವರ ದರ್ಶನ ಬಲಿ, ಬಂಡಿರಥೋತ್ಸವ, ಬಟ್ಟಲು ಕಾಣಿಕೆ ನಡೆಯಿತು.


ಬೆಳಿಗ್ಗೆ 9.30ರಿಂದ ಉತ್ಸವ ಆರಂಭಗೊಂಡು ಮಧ್ಯಾಹ್ನ ದರ್ಶನ ಬಲಿ ನಡೆಯಿತು. ಬಳಿಕ ದೇವರ ಬಂಡಿರಥೋತ್ಸವ ನಡೆಯಿತು. ನಂತರ ಬಟ್ಟಲುಕಾಣಿಕೆ, ಮಹಾಪೂಜೆ ನಡೆಯಿತು. ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಜಾತ್ರಾ ಮಹೋತ್ಸವದಲ್ಲಿ ೨ ಸಾವಿರಕ್ಕೂ ಮಿಕ್ಕಿ ಭಕ್ತರು ಪಾಲ್ಗೊಂಡು ಅನ್ನಪ್ರಸಾದ ಸ್ವೀಕರಿಸಿದರು. ಆರುವಾರ ಬಾಳಿಕೆ ಕುಟುಂಬಸ್ಥರು ಅನ್ನದಾನದ ಸೇವಾಕರ್ತರಾಗಿದ್ದರು. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಿತು. ದೇವಸ್ಥಾನದ ಪವಿತ್ರಪಾಣಿ ವೆಂಕಟ್ರಮಣ ಕುದ್ರೆತ್ತಾಯ, ಅರ್ಚಕರಾದ ವಿಷ್ಣುಮೂರ್ತಿ ಬಡೆಕ್ಕಿಲ್ಲಾಯ ಹಾಗೂ ಇತರೇ ಪುರೋಹಿತರು ಸಹಕರಿಸಿದರು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನೀರಜ್‌ಕುಮಾರ್ ರೈ ಆರುವಾರ ಬಾಳಿಕೆ, ಸದಸ್ಯರಾದ ಯತೀಶ್ ಗುಂಡಿಜೆ, ಸುನೀತ್‌ರಾಜ್ ಶೆಟ್ಟಿ ಆರುವಾರ ಬಾಳಿಕೆ, ಶ್ರೀಧರ ಪೂಜಾರಿ ತುಂಬೆತ್ತಡ್ಕ, ಸಂಜೀವ ಸುದೆಂಗಳ, ಗೋಪಾಲ ನಾಯ್ಕ ಸಿಗೆತ್ತಡಿ, ಸುಜಾತ ಜೆ.ಶೆಟ್ಟಿ ಬಡಿಲ, ಮೀನಾಕ್ಷಿ ಕೆ.ಮುಂಡೈಮಾರು, ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ ಯದುಶ್ರೀ ಆನೆಗುಂಡಿ, ಉತ್ಸವ ಸಮಿತಿ ಅಧ್ಯಕ್ಷ ಧರ್ಣಪ್ಪ ಗೌಡ ಕೊರಿಕ್ಕಾರು, ಉಪಾಧ್ಯಕ್ಷರಾದ ಪಾಂಡೇಲುಗುತ್ತು ಚಂದ್ರಹಾಸ ರೈ ಬುಡಲೂರು, ಶೀನಪ್ಪ ಗೌಡ ಪಲ್ಲಡ್ಕ, ರಾಜೀವ ಗೌಡ ಪೊಸಲಕ್ಕೆ, ಮೋಹನದಾಸ್ ಶೆಟ್ಟಿ ಬಡಿಲ, ಮುರಳಿಕೃಷ್ಣ ಬಡಿಲ, ಪ್ರಧಾನ ಕಾರ್ಯದರ್ಶಿ ವಿನೋದ್‌ಕುಮಾರ್ ಪಲ್ಲಡ್ಕ, ಕಾರ್ಯದರ್ಶಿಗಳಾದ ಶಾಂತರಾಮ ಗೌಡ ಬೇಂಗದಪಡ್ಪು, ದಾಮೋದರ ಪುಣ್ಕೆತ್ತಡಿ, ಜ್ಯೋತಿ ಕಲ್ಕಾಡಿ, ಕಾರ್ಯಕಾರಿ ಸಮಿತಿ ಸದಸ್ಯರಾದ ಕೊರಗಪ್ಪ ಗೌಡ ಮುಂಡೈಮಾರ್, ಶ್ರೀನಿವಾಸ ಗೌಡ ಪಲ್ಲಡ್ಕಪಟ್ಟೆ, ವಿಶ್ವನಾಥ ಗೌಡ ಪುತ್ಯೆ, ರಘುನಾಥ ಶೆಟ್ಟಿ ಕಲ್ಕಾಡಿ, ಸೋಮನಾಥ ಗೌಡ ಪಲ್ಲಡ್ಕ, ಶ್ರೀರಾಮ ಕೆಮ್ಮಾರ, ವಸಂತಕುಮಾರ್ ಪೊಸಲಕ್ಕೆ, ಅಭಿವೃದ್ಧಿ ಸಮಿತಿ ಸಲಹೆಗಾರ ಕೇಶವ ಅಮೈ ಕಲಾಯಿಗುತ್ತು, ಅಧ್ಯಕ್ಷ ಶೀನಪ್ಪ ಗೌಡ ವಳಕಡಮ, ಉಪಾಧ್ಯಕ್ಷರಾದ ಜಗನ್ನಾಥ ಶೆಟ್ಟಿ ಕಾರೆಗುಡ್ಡೆ, ಭವಾನಿಶಂಕರ ಪರಂಗಾಜೆ, ರಾಮ ನಾಯ್ಕ್ ಏಣಿತ್ತಡ್ಕ, ಬಾಲಕೃಷ್ಣ ಗೌಡ ಬೇಂಗದಪಡ್ಪು, ಕಾರ್ಯದರ್ಶಿಗಳಾದ ಶಶಿಕುಮಾರ್ ಅಂಬಾ, ರಾಧಾಕೃಷ್ಣ ತುಂಬೆತ್ತಡ್ಕ, ಜೊತೆ ಕಾರ್ಯದರ್ಶಿಗಳಾದ ಆನಂದ ಎಸ್.ಟಿ.ಕೆಮ್ಮಾರ, ಉಮೇಶ್ ಗೌಡ ಸಂಕೇಶ, ಶಾಂತರಾಮ್ ಬೇಂಗದಪಡ್ಪು, ಹರೀಂದ್ರ ಊರಾಜೆ ವಳಕಡಮ, ಸಚಿನ್ ಪಲ್ಲಡ್ಕ ಪಟ್ಟೆ, ಸದಸ್ಯರಾದ ವಿನೋಧರ ಗೌಡ ಮಾಳ, ರಾಮಯ್ಯ ಗೌಡ ಬುಡಲೂರು, ಕೆ.ಎಸ್.ಬಾಲಕೃಷ್ಣ ಕೊಯಿಲ, ಸುಭಾಸ್ ಶೆಟ್ಟಿ ಆರುವಾರ, ಸುಧೀಶ್ ಪಟ್ಟೆ ಪಲ್ಲಡ್ಕ, ದಿನೇಶ್ ಗೌಡ ಊರಾಜೆ, ಸುಂದರ ಕೊರಿಕ್ಕಾರು, ಲಕ್ಷ್ಮೀನಾರಾಯಣ ರಾವ್ ಆತೂರು, ಅಶೋಕ ಗೋಕುಲನಗರ, ಬೈಲುವಾರು ಸಮಿತಿ ಗ್ರಾಮ ಸಂಚಾಲಕ ಭವಿತ್‌ರಾಜ್ ಪಲ್ಲಡ್ಕ, ಸಹಸಂಚಾಲಕ ಪ್ರವೀಣ್‌ರಾಜ್ ಕೊಲ್ಯ ಹಾಗೂ ಎಲ್ಲಾ ಉಪಸಮಿತಿಗಳ ಪದಾಧಿಕಾರಿಗಳು, ಗ್ರಾಮಸ್ಥರು, ಊರು-ಪರವೂರಿನ ಭಕ್ತಾದಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here