ಪುತ್ತೂರು: ಕಲ್ಲರ್ಪೆ ಚಿನ್ನು ಹೋಟೆಲ್ ಮಾಲಕ, ಕುರಿಯ ಗ್ರಾಮದ ಮಲಾರ್ ನಿವಾಸಿ ಮೋಹನ್ (38 ವ.) ಮಾ.31 ರಂದು ಮಲಾರಿನ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ನೆರೆಯ ಮನೆಯಲ್ಲಿ ಕಾರ್ಯಕ್ರಮಕ್ಕೆಂದು ಮನೆಯವರು ಹೋಗಿದ್ದ ಸಂದರ್ಭ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಮೃತರು ತಾಯಿ, ಪತ್ನಿ, 4 ವರ್ಷದ ಮಗುವನ್ನು ಅಗಲಿದ್ದಾರೆ. ಡೆತ್ ನೋಟ್ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.