ಪುತ್ತೂರು: ಮಾದಕ ದ್ರವ್ಯ ಸೇವನೆ ಮಾಡಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟ ಹಿನ್ನೆಲೆಯಲ್ಲಿ ಆರೋಪಿಯೊಬ್ಬನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಜೋಗಿಬೆಟ್ಟು ನಿವಾಸಿ ನಿಝಾಮುದ್ದೀನ್ (27ವ.) ಬಂಧಿತ ಆರೋಪಿ.
ಮಾ.31ರಂದು ಬೆಳಿಗ್ಗೆ 9 ಗಂಟೆಗೆ ಉಪ್ಪಿನಂಗಡಿ ಠಾಣೆ ಪಿಎಸ್‌ಐ ಅವಿನಾಶ್‌ರವರು ಸಿಬ್ಬಂದಿಗಳೊಂದಿಗೆ ರಂಜಾನ್ ಹಬ್ಬದ ಪ್ರಯುಕ್ತ ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಉಪ್ಪಿನಂಗಡಿ ಜಂಕ್ಷನ್‌ನಲ್ಲಿರುವ ಫ್ಲೈ ಓವರ್ ಬಳಿ ಇಬ್ಬರು ವ್ಯಕ್ತಿಗಳ ಪೈಕಿ ಓರ್ವ ಅಮಲು ಸೇವನೆ ಮಾಡಿ ನಶೆಯಲ್ಲಿದ್ದವರಂತೆ ಮಾತನಾಡುತ್ತಾ ಅನುಚಿತವಾಗಿ ವರ್ತಿಸುತ್ತಿರುವುದನ್ನು ಕಂಡು ವಿಚಾರಿಸಿದಾಗ ಸಮರ್ಪಕ ಉತ್ತರವನ್ನು ನೀಡಲು ಅಸಮರ್ಥರಾದ ಹಿನ್ನಲೆಯಲ್ಲಿ ಸಂಶಯಗೊಂಡು ವಿಚಾರಿಸಿದಾಗ ಓರ್ವ ಮಾದಕ ದ್ರವ್ಯ ಸೇವನೆ ಮಾಡಿದ್ದಾಗಿ ಒಪ್ಪಿಕೊಂಡಿದ್ದು, ಇನ್ನೋರ್ವ ಮಾದಕ ವಸ್ತು ಸೇವನೆ ಮಾಡಿರುವುದಿಲ್ಲ ಎಂದು ತಿಳಿಸಿದ್ದಾನೆ. ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೊಳಪಡಿಸಿದಾಗ ನಿಝಾಮುದ್ದೀನ್ ಮಾದಕ ದ್ರವ್ಯ ಸೇವನೆ ಮಾಡಿರುವುದು ದೃಢಪಟ್ಟಿದ್ದು, ಈತನ ಜೊತೆಗಿದ್ದ ಮಹಮ್ಮದ್ ನಿಝಾರ್ ಮಾದಕ ದ್ರವ್ಯ ಸೇವನೆ ಮಾಡಿರುವುದು ದೃಢಪಟ್ಟಿರುವುದಿಲ್ಲ. ಮಾದಕ ದ್ರವ್ಯ ಸೇವನೆ ಮಾಡಿರುವ ನಿಝಾಮುದ್ದೀನ್ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆತನನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.