





ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಏ.1 ರಂದು ಗೊನೆ ಮುಹೂರ್ತ ನಡೆಯಿತು.



ಪ್ರಧಾನ ಅರ್ಚಕ ವೇ. ಮೂ.ವಿ.ಎಸ್ ಭಟ್ ರವರು ಗೊನೆ ಮುಹೂರ್ತ ನಡೆಸಿಕೊಟ್ಟರು. ಇನ್ನೋರ್ವ ಪ್ರಧಾನ ಅರ್ಚಕ ವಸಂತ ಕೆದಿಲಾಯ ಸಹಕರಿಸಿದರು.





ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ಶಾಸಕ ಅಶೋಕ್ ಕುಮಾರ್ ರೈ, ಸಮಿತಿ ಪದಾಧಿಕಾರಿಗಳು, ಕರಸೇವಕರು, ಭಕ್ತಾಧಿಗಳು ಉಪಸ್ಥಿತರಿದ್ದರು.











