ಕಾರಿನಲ್ಲಿ ಎಂಡಿಎಂಎ ಸಾಗಾಟ – ಇಬ್ಬರು ಆರೋಪಿಗಳ ಬಂಧನ

0


ಪುತ್ತೂರು: ನಿಷೇಧಿತ ಎಂಡಿಎಂಎ ಮಾರಾಟಕ್ಕೆಂದು ಕಾರಿನಲ್ಲಿ ಸಾಗಾಟ ಮಾಡುತ್ತಿದ್ದುದನ್ನು ಪತ್ತೆ ಮಾಡಿರುವ ಪೊಲೀಸರು ಇಬ್ಬರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


ನಗರ ಪೊಲೀಸ್ ಠಾಣೆ ನಿರೀಕ್ಷಕರು ಮಾ.30ರಂದು ಬೆಳಿಗ್ಗೆ 10:30 ಗಂಟೆಗೆ ನರಿಮೊಗರು ಗ್ರಾಮದ ಮುಕ್ವೆ ಎಂಬಲ್ಲಿ ತಾತ್ಕಾಲಿಕ ಚೆಕ್ ಪಾಯಿಂಟ್‌ನಲ್ಲಿ ಸುಬ್ರಹ್ಮಣ್ಯ- ಮಂಜೇಶ್ವರ ರಾಜ್ಯ ಹೆದ್ದಾರಿಯಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಸಮಯ, ಸುಬ್ರಹ್ಮಣ್ಯ ಕಡೆಯಿಂದ ಬಂದ ಮಾರುತಿ ಸುಝುಕಿ ಆಲ್ಟೋ 800 ಕಾರನ್ನು ಪರಿಶೀಲಿಸಿದಾಗ ಕಾರಿನ ಡ್ಯಾಶ್ ಬೋರ್ಡ್‌ನಲ್ಲಿ ಮಾದಕ ವಸ್ತುಗಳನ್ನು ಸೇದುವ ಸಾಧನಗಳು, ತೂಕ ಮಾಪಕ ಕಂಡುಬಂದಿತ್ತು.

ಕಾರಿನ ಚಾಲಕ ಹಾಗೂ ಮತ್ತೊಬ್ಬನಲ್ಲಿ ಈ ಬಗ್ಗೆ ವಿಚಾರಿಸಿದಾಗ ತಡವರಿಸಿಕೊಂಡು ಉತ್ತರಿಸಿದ್ದು ಪ್ರಶ್ನಿಸಿದಾಗ,ತಮ್ಮ ಬಳಿ ಎಂಡಿಎಂಎ ವಸ್ತು ಇರುವುದಾಗಿಯೂ, ಇದನ್ನು ಮಾರಾಟ ಮಾಡಲು ತೆರಳುತ್ತಿರುವುದಾಗಿ ಒಪ್ಪಿಕೊಂಡಿದ್ದರು. ನಿಷೇಧಿತ ವಸ್ತುವಾದ ಎಂಡಿಎಂಎಯನ್ನು ತಮ್ಮ ವಶದಲ್ಲಿಟ್ಟುಕೊಂಡು ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದ ಆರೋಪಿಗಳಾದ ಇಸುಬು ಫೈಝಲ್ (30ವ.) ಮತ್ತು ತಸ್ಲೀಪ್(26ವ.) ಎಂಬವರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here