ವಿಟ್ಲ: ಪೊಲೀಸ್ ಇಲಾಖೆಯಲ್ಲಿ ಸಲ್ಲಿಸಿರುವ ಅತ್ಯುತ್ತಮ ಸೇವೆಯನ್ನು ಗುರುತಿಸಿ ನೀಡುವ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ವಿಟ್ಲ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಹೆಚ್.ಇ. ನಾಗರಾಜ್ ರವರು ಆಯ್ಕೆಯಾಗಿದ್ದಾರೆ.
ಗಂಭೀರ ಪ್ರಕರಣಗಳ ತನಿಖೆ ಹಾಗೂ ಪತ್ತೆ ಕಾರ್ಯದಲ್ಲಿ ಸಮಗ್ರವಾಗಿ ಕರ್ತವ್ಯ ನಿರ್ವಹಿಸಿದ ಹಿನ್ನೆಲೆಯಲ್ಲಿ ಹೆಚ್.ಇ. ನಾಗರಾಜ್ ರವರು 2022ನೇ ಸಾಲಿನ ಮುಖ್ಯಮಂತ್ರಿ ಪದಕ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ. 2007ನೇ ಬ್ಯಾಚ್ನ ಪಿಎಸ್ಐ ಆಗಿರುವ ಹೆಚ್.ಈ. ನಾಗರಾಜ್ ರವರು ಆರಂಭದಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಪ್ರೊಬೇಷನರಿ ಅವಧಿ ಮುಗಿಸಿ ಚಿಕ್ಕಮಗಳೂರು ತರಿಕೆರೆ ಪೊಲೀಸ್ ಠಾಣೆಯಲ್ಲಿ ಎಸ್.ಐ. ಆಗಿ ಕರ್ತವ್ಯ ಆರಂಭಿಸಿದ್ದರು. ಆ ಬಳಿಕ ಕಡಬ, ಬಂಟ್ವಾಳ ಗ್ರಾಮಂತರ, ಪುತ್ತೂರು ಸಂಚಾರ ಠಾಣೆ, ವಿಟ್ಲ, ವೇಣೂರು ಠಾಣೆಯಲ್ಲಿ ಎಸ್.ಐ. ಆಗಿ ಕರ್ತವ್ಯ ನಿರ್ವಹಿಸಿ ಅಲ್ಲಿಂದ ಇನ್ಸ್ ಪೆಕ್ಟರ್ ಆಗಿ ಭಡ್ತಿ ಹೊಂದಿ ಭಟ್ಕಳ ಕೋಸ್ಟಲ್ ಸೆಕ್ಯೂರಿಟಿ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು. ಆ 6 ಬಳಿಕ ಮೇಲ್ದರ್ಜೆಗೇರಿದ್ದ ವಿಟ್ಲ ಪೊಲೀಸ್ ಠಾಣೆಗೆ ಪ್ರಥಮ ಇನ್ಸ್ ಪೆಕ್ಟರ್ ಆಗಿಮಿಸಿ, ಇದೀಗ ಇಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ದಕ್ಷ ಪೊಲೀಸ್ ಅಧಿಕಾರಿಯಾಗಿರುವ ಹೆಚ್.ಈ. ನಾಗರಾಜ್ ರವರು ಹಲವಾರು ಕಠಿಣ ಪ್ರಕರಣಗಳನ್ನು ಭೇದಿಸುವಲ್ಲಿ ಸಫಲರಾಗಿದ್ದರು ಮಾತ್ರವಲ್ಲದೆ ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದರು.ನಾಗರಾಜ್ ರವರು ಮೂಲತಃ ಹಾಸನ ಜಿಲ್ಲೆಯವರಾಗಿದ್ದಾರೆ. ಜಿಲ್ಲೆಯಾದ್ಯಂತ ನಡೆದ ಹಲವಾರು ಪ್ರಕರಣಗಳ ತನಿಖಾ ತಂಡಗಳಲ್ಲಿ ಇವರು ಕರ್ತವ್ಯ ನಿರ್ವಿಸಿದ್ದರು. ಇಷ್ಟು ಮಾತ್ರವಲ್ಲದೆ ತನ್ನ ಠಾಣಾ ವ್ಯಾಪ್ತಿಯಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಅವರು ವಿಶೇಷ ಪಾತ್ರವಹಿಸಿದ್ದರು. ಪದಕ ಪ್ರಧಾನ ಸಮಾರಂಭವು ಏ.೨ರಂದು ಬೆಳಗ್ಗೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೆ.ಎಸ್.ಆರ್.ಪಿ ಪರೇಡ್ ಗ್ರೌಂಡ್ ನಲ್ಲಿ ನಡೆಯಲಿದೆ.