ಪ್ಲಾಸ್ಟಿಕ್ ಮುಕ್ತ ಪಟ್ಟಣ ಮಾಡಲು ಸಾರ್ವಜನಿಕರ, ವ್ಯಾಪಾರಸ್ಥರ ಸಹಕಾರ ಯಾಚನೆ
ವಿಟ್ಲ: ಮಂಗಳೂರು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೇಜನಾ ನಿರ್ದೇಶಕರ ಸೂಚನೆ ಮೇರೆಗೆ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ಸಲುವಾಗಿ ಮತ್ತು ಸಾರ್ವಜನಿಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಎ.1ರಂದು ನಡೆದ ವಿಟ್ಲ ವಾರದ ಸಂತೆಯಲ್ಲಿ ವ್ಯಾಪಾರಸ್ಥರಿಗೆ ಮತ್ತು ಸಾರ್ವಜನಿಕರಿಗೆ ಉಚಿತವಾಗಿ ಬಟ್ಟೆ ಚೀಲ ವಿತರಿಸಿ ಅವರಿಗೆ ಮಾಹಿತಿ ನೀಡಲಾಯಿತು.
ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಕರುಣಾಕರ ನಾಯ್ತೊಟ್ಟು ರವರು ಬಟ್ಟೆ ಚೀಲ ವಿತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಖ್ಯಾಧಿಕಾರಿ ಕರುಣಾಕರ ವಿ ರವರು ಪ್ಲಾಸ್ಟಿಕ್ ನಿಂದ ಆಗುತ್ತಿರುವ ಸಮಸ್ಯೆಯನ್ನು ವಿವರಿಸಿ ಪ್ಲಾಸ್ಟಿಕ್ ಮುಕ್ತ ಪಟ್ಟಣ ಮಾಡಲು ಸಾರ್ವಜನಿಕರು ಮತ್ತು ವ್ಯಾಪಾರಸ್ಥರು ಸಹಕಾರ ನೀಡಬೇಕೆಂದು ಕೋರಿದರು. ಈ ಸಂದರ್ಭದಲ್ಲಿ ಸಮುದಾಯ ಸಂಘಟನಾಧಿಕಾರಿ ಶ್ರೀ ಶೈಲ ಸಂಕಣಗೌಡ, ಲ್ಯಾನ್ಸಿ ಬ್ರಾಯನ್ ಲೋಬೋ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.