


ಪುತ್ತೂರು: ಕಾಸರಗೋಡಿನ ಮಧೂರು ಶ್ರೀಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ನಡೆಯುತ್ತಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಮೂಡಪ್ಪ ಸೇವೆ ಸಲುವಾಗಿ ಆಯೋಜಿಸಿದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಎರಡನೇಯ ಪ್ರಧಾನ ಗೌರಿತಯನ ವೇದಿಕೆಯಲ್ಲಿ ‘ನೃತ್ಯೋಹಂ’ ಭರತನಾಟ್ಯ ಪ್ರದರ್ಶನಗೊಂಡಿತು.



ಪುತ್ತೂರಿನ ನೃತ್ಯೋಪಾಸನಾ ಕಲಾ ಅಕಾಡೆಮಿ ಕಲಾ ತಂಡದ ವಿದ್ಯಾರ್ಥಿಗಳು ನೃತ್ಯಗುರು ವಿದುಷಿ ಶಾಲಿನಿ ಆತ್ಮಭೂಷಣ್ ಮಾರ್ಗದರ್ಶನದಲ್ಲಿ ಭರತನಾಟ್ಯ ಕಾರ್ಯಕ್ರಮ
ನಡೆಸಿಕೊಟ್ಟರು. ದೇವಸ್ಥಾನದ ಸಾಂಸ್ಕೃತಿಕ ಕಾರ್ಯಕ್ರಮ ಸಮಿತಿ ವತಿಯಿಂದ ಕಲಾತಂಡವನ್ನು ಪುರಸ್ಕರಿಸಲಾಯಿತು.
