ಪುತ್ತೂರು: ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ 2024-25 ರ ವಾರ್ಷಿಕ ವಿಶೇಷ ಶಿಬಿರವು “ಭಾರತಕ್ಕಾಗಿ ಯುವಜನತೆ, ಡಿಜಿಟಲ್ ಸಾಕ್ಷರತೆಗಾಗಿ ಯುವಜನತೆ” ಎಂಬ ಧ್ಯೆಯವಾಕ್ಯದೊಂದಿಗೆ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿಯ ರಾಷ್ಟ್ರೀಯ ಸೇವಾ ಯೋಜನಾ ಕೋಶದ ನೆರವಿನೊಂದಿಗೆ ಬುಧವಾರದಿಂದ ಏಪ್ರಿಲ್ 8ರವರೆಗೆ ದೋಳ್ಪಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ ನೆರವೇರಿಸಲಿದ್ದು, ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಆಡಳಿತ ಮಂಡಳಿಯ ಅಧ್ಯಕ್ಷ ಸುರೇಂದ್ರ ಕಿಣಿ ವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕಾಣಿಯೂರು ಗ್ರಾಮ ಪಂಚಾಯತ್ ನ ಅಧ್ಯಕ್ಷ ವಿಶ್ವನಾಥ್ ಕೊಪ್ಪ, ಕಾಣಿಯೂರು ಗ್ರಾಮ ಪಂಚಾಯತ್ ಸದಸ್ಯರಾದ ದೇವಿಪ್ರಸಾದ್ ದೋಳ್ಪಾಡಿ, ಕಾಣಿಯೂರು ಗ್ರಾಮ ಪಂಚಾಯತ್ ನ ಸದಸ್ಯರು ಹಾಗೂ ಸ. ಹಿ. ಪ್ರಾ. ಶಾಲೆ ದೋಳ್ಪಾಡಿಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಲೋಕಯ್ಯ ಪರವ, ಕಾಣಿಯೂರು ಕ್ಲಸ್ಟರ್ ನ ಸಿ. ಆರ್. ಪಿ. ಯಶೋಧ, ಪಿ.ಡಬ್ಲ್ಯೂ.ಡಿ. ಗುತ್ತಿಗೆದಾರರಾದ ಮೋಹನದಾಸ್ ರೈ ಬಳ್ಳಾಡಿ, ಸಂಚಾಲಕರು, ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಸಂಚಾಲಕರಾದ ವಿಜಯನಾರಾಯಣ ಕೆ.ಎಂ, ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕಾನೂನು ಅಧ್ಯಯನ ವಿಭಾಗದ ನಿರ್ದೇಶಕರಾದ ಡಾ. ಬಿ. ಕೆ. ರವೀಂದ್ರ ಭಾಗವಹಿಸಲಿದ್ದಾರೆ. ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲೆ ಅಕ್ಷತಾ ಎ. ಪಿ., ದೋಳ್ಪಾಡಿಯ ಸ. ಉ. ಹಿ. ಪ್ರಾ. ಶಾಲೆಯ ಮುಖ್ಯ ಗುರುಗಳಾದ ಜಯಣ್ಣ ಎಸ್, , ಎಸ್. ಡಿ.ಎಂ. ಸಿ. ಅಧ್ಯಕ್ಷ ದಯಾನಂದ ಕೂರೇಲು, ಉಪಾಧ್ಯಕ್ಷೆ ನವೀನಾ ವಿ. ರೈ ಗೌರವ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಮೂಡಿಬರಲಿದೆ.